ಕೆಎಸ್ಆರ್ ಟಿಸಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಹಾಸನ: ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನಿಂದ ಬೇಲೂರು ಮಾರ್ಗವಾಗಿ ಹಾಸನ ಮೂಲಕ ಮಂಡ್ಯಕ್ಕೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮತ್ತು ಹಾಸನ ಮಾರ್ಗವಾಗಿ ಬೇಲೂರಿನ ಕಡೆಗೆ ಮೀನುಗಳನ್ನು ಸಾಗಿಸುಗುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿ ಈ‌ ದುರ್ಘಟನೆ ಸಂಭವಿಸಿದೆ.

ಮೃತಪಟ್ಟವರ ಗುರುತು ಇನ್ನೂ ತಿಳಿದುಬಂದಿಲ್ಲ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಲಾರಿ ಎಂಜಿನ್ ಒಳಗೆ ಸಿಲುಕಿಕೊಂಡು ಸಾವಿಗೀಡಾಗಿದ್ದಾನೆ. ಕೂದಲೆಳೆ ಅಂತರದಲ್ಲಿ ಬಸ್ ಚಾಲಕ ಪಾರಾಗಿದ್ದು, ಬಸ್ ನಲ್ಲಿದ್ದ ಹಲವು ಮಂದಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಬೇಲೂರು ಮತ್ತು ಹಾಸನದ ಸರ್ಕಾರಿ ಆಸ್ಪತ್ರೆಗೆ  ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com