ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ: ಡಿಕೆ ಶಿವಕುಮಾರ್ ದಂಪತಿಯಿಂದ ದೇವಿಗೆ ಪೂಜೆ

ಹಾಸನಾಂಬೆ ದೇವಿ ದರ್ಶನಕ್ಕೆ ಸೋಮವಾರ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.
ಡಿಕೆ ಶಿವಕುಮಾರ್ ದಂಪತಿ (ಸಂಗ್ರಹ ಚಿತ್ರ)
ಡಿಕೆ ಶಿವಕುಮಾರ್ ದಂಪತಿ (ಸಂಗ್ರಹ ಚಿತ್ರ)
Updated on

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಸೋಮವಾರ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಇಂದು ಹಾಸನಾಂಬ ದರ್ಶನದ ಕೊನೆಯ ದಿನವಾದ್ದರಿಂದ ಇಂದು ಬೆಳಗ್ಗೆ 6.45ರ ಸುಮಾರಿಗೆ ಹಾಸನಾಂಬ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ದೀಪಾವಳಿ ಹಬ್ಬದ ದಿನವೇ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಮಧ್ಯಾಹ್ನದ ನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತಿದೆ.

ನಂತರ ಮಾತನಾಡಿದ ಅವರು, ಇದೊಂದು ಪುಣ್ಯಕ್ಷೇತ್ರ. ನಂಬಿಕೆ ಎಂಬ ಪದಕ್ಕೆ ಪವಿತ್ರ ಧರ್ಮಕ್ಷೇತ್ರಗಳೇ ಸಾಕ್ಷಿ. ಹಾಸನಾಂಬೆ ದೇವಿ ರಾಜ್ಯದ ಜನತೆಯ ಎಲ್ಲರ ದುಃಖ ದೂರ ಮಾಡಲಿ. ನಮ್ಮಂಥವರಿಗೆ ರಾಜ್ಯದವರಿಗೆ ಇರುವ ಎಲ್ಲ ನೋವನ್ನು ಪರಿಹಾರ ಮಾಡಲಿ ಎಂದು ದೇವಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com