ರಾಜ್ಯ

ರಾಜ್ಯದಲ್ಲಿ ಇಂದು 1,336 ಕೊರೋನಾ ಪ್ರಕರಣ ಪತ್ತೆ, 2,100 ಡಿಸ್ಚಾರ್ಜ್!

ರಾಜ್ಯದಲ್ಲಿ ಇಂದು 1,336 ಕೊರೋನಾ ಪ್ರಕರಣ ಪತ್ತೆ, 2,100 ಡಿಸ್ಚಾರ್ಜ್!
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ದಿನ ಕಳೆದಂತೆ ಕೊರೋನಾ ಹಾವಳಿ ಕಡಿಮೆಯಾಗುತ್ತಿದ್ದು ಇಂದು 1,336 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 1,336 ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ 8,64,140ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 16 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,557 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 2,100 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,27,241 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 25,323 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 729 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,58,606ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 9 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4,018ಕ್ಕೆ ಏರಿಕೆಯಾಗಿದೆ. 

Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.