4 ಹೆಚ್ಚುವರಿ ವಿಶೇಷ ರೈಲುಗಳ ಸಂಚಾರಕ್ಕೆ ಇಲಾಖೆ ಅನುಮತಿ

ರಾಜ್ಯದ ರೈಲು ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲ್ವೆ ಇಲಾಖೆ ನಾಲ್ಕು ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ಅನುಮತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲ್ವೆ ಇಲಾಖೆ ನಾಲ್ಕು ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ಅನುಮತಿ ನೀಡಿದೆ.

ಯಶವಂತಪುರ - ಬೀದರ್ - ಯಶವಂತಪುರ ಮತ್ತು ಯಶವಂತಪುರ- ಲಾತೂರ್ - ಯಶವಂತಪುರ ನಡುವೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಯಶವಂತಪುರದಿಂದ ಬೀದರ್ ಗೆ ಬರುವ ರೈಲು ಸಂಖ್ಯೆ 06271 ಮಂಗಳವಾರದಿಂದ ವಾರದಲ್ಲಿ ನಾಲ್ಕು ದಿನ ಓಡಲಿದೆ. ಸೋಮವಾರ, ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಜೆ 7ಗಂಟೆಗೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 9.15ಕ್ಕೆ ಬೀದರ್ ಗೆ ಆಗಮಿಸಲಿದ್ದು. 06272, ಸೋಮವಾರ, ಮಂಗಳವಾರ, ಬುಧವಾರ ಮತ್ತು ಶುಕ್ರವಾರ ಸಂಜೆ 6:05ಕ್ಕೆ ಹೊರಡಲಿದ್ದು. ಮರುದಿನ ಬೆಳಿಗ್ಗೆ 7.40ಕ್ಕೆ ಯಶವಂತಪುರ ಕ್ಕೆತಲುಪಲಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com