ಕೊರೋನಾ ಆತಂಕದ ನಡುವಲ್ಲೇ ಇಂದಿನಿಂದ ಕಾಲೇಜು ಆರಂಭ!

ಕೊರೋನಾ ಕಾರಣ ಕಳೆದ 9 ತಿಂಗಳುಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಸರ್ಕಾರದ ಆದೇಶದಲಂತೆ ನ.17ರ ಮಂಗಳವಾರದಿಂದ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭ ಮಾಡುತ್ತಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಕಾರಣ ಕಳೆದ 9 ತಿಂಗಳುಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಸರ್ಕಾರದ ಆದೇಶದಲಂತೆ ನ.17ರ ಮಂಗಳವಾರದಿಂದ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭ ಮಾಡುತ್ತಿವೆ. 

ಶೈಕ್ಷಣಿಕ ಚಟುವಟಿಕೆಗಳನ್ನು ಆರಂಬಿಸಲು ತರಗತಿ ಕೊಠಡಿಗಳು, ಹಾಸ್ಟೆಲ್ ಕೊಠಡಿಗಳು, ಶೌಚಾಲಯ, ಪ್ರಯೋಗಾಲಯಗಳ ಸ್ವಚ್ಛತೆಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. 

ಮೊದಲ ಹಂತದಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಖಉದ್ದು ತರಗತಿ ಹಾಜರಾತಿಗೆ ಅವಕಾಶ ನೀಡಲಾಗಿದೆ. ಉಳಿದ ವರ್ಷಗಳ ವ್ಯಾಸಾಂಗದ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಆನ್'ಲೈನ್ ಶಿಕ್ಷಣ ನೀಡಲು ವಿಶ್ವವಿದ್ಯಾಲಯಗಳಉ ಮತ್ತು ಕಾಲೇಜುಗಳು ತೀರ್ಮಾನ ಕೈಗೊಂಡಿವೆ. ಹಂತ ಹಂತವಾಗಿ ಎಲ್ಲಾ ವಿದ್ಯಾರ್ಥಿಗಳು ಭೌತಿಕ ತರಗತಿ ಆರಂಭಿಸುವುದಾಗಿ ತಿಳಿಸಿವೆ. 

ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಪೋಷಕರಿಂದ ಲಿಖಿತ ಒಪ್ಪಿಗೆ ಪತ್ರ ನೀಡಬೇಕಿದೆ. ಬೋಧಕ ವರ್ಗ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು 72 ಗಂಟೆ ಮುಂಚಿತವಾಗಿ ಕೋವಿಡ್-19 ಆರ್'ಟಿಪಿಸಿಆರ್ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ನೀಡಬೇಕು ಎಂದು ಸೂಚಿಸಿವೆ. 

ತರಗತಿಗೆ ಹಾಜರಾಗುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕು, ಕಾಲೇಜು ಆವರಣ, ತರಗತಿಗಳಲ್ಲಿ ವಿದ್ಯಾರ್ಥಿಗಳು ಗುಂಪೂಗೂಡದೆ ಕನಿಷ್ಠ ಆರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪೋಷಕರ ಒಪ್ಪಿಗೆ ಪತ್ರ ಹಾಗೂ ಕೋವಿಡ್ ಪರೀಕ್ಷೆ ಮಾಡಿಸದ ವಿದ್ಯಾರ್ಥಿಗಳು ಹಾಜರಾತಿ ನೀಡಲಾಗುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com