ನ.20 ರಂದು ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ: ಸುರೇಶ್ ಕುಮಾರ್

ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20ರಿಂದ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್
Updated on: 

ಬೆಂಗಳೂರು: ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20ರಿಂದ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ನವೆಂಬರ್ 20ರಂದು ಮಾನ್ಯ ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ನೇಮಕಾತಿ ಆದೇಶ ನೀಡಲಿದ್ದಾರೆ. ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನಡೆಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಕೋವಿಡ್‍ನಿಂದಾಗಿ ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗಳ ಆರ್ಥಿಕ ಮಿತವ್ಯಯ ಆದೇಶವಿದ್ದುದರಿಂದ ಹಾಗೂ ಶಾಲಾ ಕಾಲೇಜುಗಳ ಆರಂಭ ಕುರಿತು ಅನಿಶ್ಚಿತತೆ ಹಿನ್ನೆಲೆಯಲ್ಲಿ ಉಪನ್ಯಾಸಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಸಾಧ್ಯವಾಗಿರಲಿಲ್ಲ. ಈ ಮಿತವ್ಯಯ ಆದೇಶವಿದ್ದರೂ ಸಹ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೌನ್ಸೆಲಿಂಗ್ ನಡೆಸಿ ಸ್ಥಳ ನಿಯುಕ್ತಿಗೆ ಅವಕಾಶ ನೀಡಲಾಗಿತ್ತು ಎಂದರು.

ಇದೇ ವೇಳೆ ಪಿಯು ಉಪನ್ಯಾಸಕರ ವರ್ಗಾವಣೆಗೆ ಪ್ರಕ್ರಿಯೆ ನವೆಂಬರ್ 23ರಿಂದ ಆರಂಭವಾಗಲಿದ್ದು, ಅಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com