ಸಾಂದರ್ಭಿಕ ಚಿತ್ರ
ರಾಜ್ಯ
ಚನ್ನಗಿರಿ ಬಳಿ ಬಸ್ ಅಪಘಾತ: 45 ಜನರಿಗೆ ಗಾಯ
ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಹಾಳು ಗ್ರಾಮದ ಬಳಿ ಎರಡು ಖಾಸಗಿ ಬಸ್ ಗಳು ಮುಖಾಮುಖಿಯಾಗಿ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ.
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಹಾಳು ಗ್ರಾಮದ ಬಳಿ ಎರಡು ಖಾಸಗಿ ಬಸ್ ಗಳು ಮುಖಾಮುಖಿಯಾಗಿ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ.
ರಾಜ್ಯ ಹೆದ್ದಾರಿ 65 ರಲ್ಲಿ ದುರ್ಘಟನೆ ಜರುಗಿದ್ದು ಚನ್ನಗಿರಿ-ಭದ್ರಾವತಿ ಹಾಗೂ ಭದ್ರಾವತಿ-ಚನ್ನಗಿರಿ ಕಡೆ ಚಲಿಸುತ್ತಿದ್ದ ಎರಡು ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಇನ್ನು ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನ ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚನ್ನಗಿರಿ ಸಾರ್ವಜನಿಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚನ್ನಗಿರಿ ಠಾಣೆ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ