

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ವಾಯಭಾರ ಕುಸಿತದ ಕಾರಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯ ಹವೆಡೆ ಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ಎರಡು ದಿನ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಕೆಲವು ಕಡೆ ಸುರಿಯುತ್ತಿರುವ ಮಳೆ 2 ದಿನ ಮುಂದುವರಿಯಯುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.