
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎಸ್ ಸಿ ಸಕ್ಸೇನಾ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬೆಳಿಗ್ಗೆ 6:30ಕ್ಕೆ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತೀವ್ರ ಅನಾರೋಗ್ಯ ದಿಂದ ಬಳಲುತ್ತಿದ್ದ ಅವರು ಒಂದೂವರೆ ತಿಂಗಳು ಐಸಿಯೂನಲ್ಲಿ ಚಿಕಿತ್ಸೆ ಪಡೆದಿದ್ದರು. 10 ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಗಿತ್ತು. ಆದರೆ, ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡಿದ್ದು, ಚಿಕಿತ್ಸೆ ಪಲಿಸದೇ ಮೃತಪಟ್ಟಿದ್ದಾರೆ.
1976ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಸಕ್ಸೇನಾ ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 2ಕ್ಕೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಲಿದೆ ಎಂದು ಹೇಳಲಾಗಿದೆ.
Advertisement