ಬೆಂಗಳೂರು: ಜೂಜಾಡುತ್ತಿದ್ದ 72 ಜನ ಸಿಸಿಬಿ ವಶಕ್ಕೆ

ಕರ್ನಾಟಕ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 4.1 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕರ್ನಾಟಕ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 4.1 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.

ನಗರದ ಶಾಂಪುರದ ಎಲ್ ಆರ್ ಬಳಿಯ ಕ್ಲಬ್ ನಲ್ಲಿ ಜೂಜಾಟದಲ್ಲಿ ತೊಡಗಿದ್ದ 72 ಜನರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

72 ಜನರನ್ನು ಬಂಧಿಸಿ, ಬಂಧಿತರಿಂದ 4.1 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸಿಸಿಬಿ ವಿಶೇಷ ತಂಡಕ್ಕೆ ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಗುರುವಾರ ತಡರಾತ್ರಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com