ಹಾಸನ: ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವ ಪ್ರೇಮಿಗಳು ಶವವಾಗಿ ಪತ್ತೆ

ಜಿಲ್ಲೆಯ ಬಾಗೂರು ನವಿಲೆ ಸುರಂಗದ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವ ಪ್ರೇಮಿಗಳ ಮೃತದೇಹ ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹಾಸನ: ಜಿಲ್ಲೆಯ ಬಾಗೂರು ನವಿಲೆ ಸುರಂಗದ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವ ಪ್ರೇಮಿಗಳ ಮೃತದೇಹ ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದೆ. 

ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದಿರುವ ಸ್ಥಿತಿಯಲ್ಲಿ ಪ್ರೇಮಿಗಳ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದ ಸುಶ್ಮಿತಾ(18), ಹಾಗೂ ಮತಿಘಟ್ಟ ಗ್ರಾಮದ ರಮೇಶ್(19) ಎಂದು ಗುರುತಿಸಲಾಗಿದೆ.

ಐಟಿಐ ಓದುತ್ತಿದ್ದ ರಮೇಶ್‌ ಹಾಗೂ ಪದವಿ ವ್ಯಾಸಂಗ ಮಾಡುತ್ತಿದ್ದ ಸುಶ್ಮಿತಾ ಪರಸ್ಪರ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಅನ್ಯ ಜಾತಿಯಾಗಿದ್ದರಿಂದ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಮನೆಯವರ ವಿರೋಧಕ್ಕೆ ಹೆದರಿ ಯುವಜೋಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ನ.16 ರಂದು ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ದ್ವಿಚಕ್ರ ನಿಲ್ಲಿಸಿ ಜೋಡಿ ನಾಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಇಬ್ಬರ ಮೃತದೇಹ ತುಮಕೂರು ಜಿಲ್ಲೆಯ ನೊಣವಿನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. 

ಪ್ರೇಮಿಗಳು ತಾವೇ ಆತ್ಮಹತ್ಯೆಗೆ ಶರಣಾಗಿದ್ದಾರೋ ಅಥವಾ ಯಾರಾದರೂ ಕೊಲೆ ಮಾಡಿ ನಾಲೆಗೆ ಎಸೆದಿದ್ದಾರೋ ಎಂಬುದರ ಕುರಿತಾಗಿಯೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com