ಬೆಂಗಳೂರು: ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಸಂಭವಿಸಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಸಂಭವಿಸಿದೆ. 

ಮೃತ ಬೈಕ್ ಸವಾರನನ್ನು 21 ವರ್ಷದ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬೈಕ್ ಹಿಂಬದಿಯಲ್ಲಿ ಕುಳಿತ್ತಿದ್ದ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com