ಆನ್ ಲೈನ್ ಜೂಜಾಟ ನಿಷೇಧಿಸಲು ಸರ್ಕಾರದ ಚಿಂತನೆ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಆನ್ ಜೂಜಾಟಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೊಲೀಸರಿಗೆ ಪ್ರಶಸ್ತಿ ಪ್ರದಾನ
ಪೊಲೀಸರಿಗೆ ಪ್ರಶಸ್ತಿ ಪ್ರದಾನ
Updated on

ಬೆಂಗಳೂರು: ರಾಜ್ಯದಲ್ಲಿ ಆನ್ ಜೂಜಾಟಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿಯವರ ಪೊಲೀಸ್‌ ಪದಕ ಪ್ರದಾನ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಆನ್‌ಲೈನ್‌ ಜೂಜಾಟದಂತ ದುಶ್ಚಟಗಳಿಗೆ ಯುವಜನರು ತುತ್ತಾಗುತ್ತಿದ್ದಾರೆ.

ಪರಿಣಾಮವಾಗಿ ಅವರ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಈ ಪರಿಸ್ಥಿತಿ ತಪ್ಪಿಸಲು ಆನ್‌ಲೈನ್‌ ಗ್ಯಾಂಬ್ಲಿಂಗ್ ನಿಷೇಧಿಸುವ ಚಿಂತನೆ ನಡೆದಿದೆ’ ಎಂದು ಹೇಳಿದ್ದಾರೆ.

ಬೇರೆ, ಬೇರೆ ರಾಜ್ಯಗಳು ಈಗಾಗಲೇ ಆನ್‌ ಲೈನ್‌ ಜೂಜಾಟ ನಿಷೇಧಿಸಿವೆ. ಅಲ್ಲಿ ಈ ಸಂಬಂಧ ರೂಪಿಸಿರುವ ಕಾನೂನುಗಳು ಮತ್ತು ಹೊರಡಿಸಿರುವ ಆದೇಶಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೂ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಪೊಲೀಸರ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ಗಮನ ಹರಿಸಲಿದೆ,  ನಕ್ಸಲೈಟ್, ಭಯೋತ್ಪಾದನೆ ಮುಂತಾದ ಅಪರಾಧಗಳನ್ನು ಮಟ್ಟ ಹಾಕುವಲ್ಲಿ ಪೊಲೀಸರು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವುದು, ನಕ್ಸಲ್‌ ಚಟುವಟಿಕೆ ನಿಗ್ರಹ, ಗುಪ್ತವಾರ್ತೆ ಸಂಗ್ರಹ ಸೇರಿದಂತೆ ಹಲವು ರೀತಿಯಲ್ಲಿ ರಾಜ್ಯದ ಪೊಲೀಸರು ಸಮಾಜದ ರಕ್ಷಣೆಗಾಗಿ ದುಡಿಯುತ್ತಿದ್ದಾರೆ. ಅವರ ಸೇವೆ ಶ್ಲಾಘನೀಯವಾದುದು. ಕರ್ನಾಟಕ ಪೊಲೀಸ್‌ ಪಡೆ ‘ವಿಶ್ವಾಸಾರ್ಹ ಪಡೆ’ ಎಂಬ ಮನ್ನಣೆ ಪಡೆದಿದೆ. ಅದು ಮತ್ತಷ್ಟು ಎತ್ತರಕ್ಕೆ ಏರಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com