ಶಿವಮೊಗ್ಗ: ಶಿವಮೊಗ್ಗ ಕೋವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಸೆಂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದ್ದು ಆಸ್ಪತ್ರೆ ತುಂಬೆಲ್ಲಾ ದಟ್ಟ ಹೊಗೆ ಆವರಿಸಿದೆ.
ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.
ದೊಡ್ಡಪೇಟೆ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅವಘಡದ ಬಗ್ಗೆ ತಿಳಿಯುತ್ತಿದ್ದಂತೆ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ.
Advertisement