ಡಿಸೆಂಬರ್'ನಲ್ಲಿ ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಭೇಟಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಡಿಸೆಂಬರ್ ತಿಂಗಳ ಮೂರನೇ ವಾರದಲ್ಲಿ ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆಗಳಿದ್ದು, ಭೇಟಿ ವೇಳೆ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ. 
ಜೆಪಿ ನಡ್ಡಾ
ಜೆಪಿ ನಡ್ಡಾ
Updated on: 

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಡಿಸೆಂಬರ್ ತಿಂಗಳ ಮೂರನೇ ವಾರದಲ್ಲಿ ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆಗಳಿದ್ದು, ಭೇಟಿ ವೇಳೆ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ. 

ವಿವಿಧ ಜಿಲ್ಲೆಗಳ ಬಿಜೆಪಿ ನಾಯಕರೊಂದಿಗೆ ನಡ್ಡಾ ಅವರು ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು, ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

ರಾಜ್ಯದಲ್ಲಿ ಪಕ್ಷದ ನೆಲೆಯನ್ನು ಮತ್ತಷ್ಟು ಬಲಪಡಿಸುವತ್ತ ನಡ್ಡಾ ಅವರು ಗಮನ ಹರಿಸಿದ್ದು, ಇದಕ್ಕಾಗಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ. 

ಭೇಟಿ ವೇಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರೊಂದಿಗೆ ಸಭೆ ನಡೆಸಲಿದ್ದು, ರಾಜ್ಯ ಆಡಳಿತದಲ್ಲಾಗುತ್ತಿರುವ ಆಗುಹೋಗುಗಳನ್ನೂ ಗಮನ ಹರಿಸಲಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ. 

ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಕೆಲ ಬಿಜೆಪಿ ಮುಖಂಡರಿಗೂ ಎಚ್ಚರಿಕೆ ನೀಡಲಿದ್ದಾರೆಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಚುನಾವಣೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಪಕ್ಷದ ಕಾರ್ಯತಂತ್ರಗಳ ಬಗ್ಗೆಯೂ ನಡ್ಡಾ ಅವರು ಚರ್ಚಿಸಲಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com