ಐಎಂಎ ಹಗರಣ: ಐಪಿಎಸ್​ ಅಧಿಕಾರಿ ಅಜಯ್​ ಹಿಲೋರಿಗೆ ಸಿಬಿಐ ಬುಲಾವ್

 ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.
ಅಜಯ್ ಹಿಲೋರಿ
ಅಜಯ್ ಹಿಲೋರಿ
Updated on

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.

ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಜತೆ ಡೀಲ್ ನಡೆಸಿದ್ದರೆನ್ನುವ ಆರೋಪ ಹಿಲೋರಿ ಅವರ ಮೇಲಿದ್ದು ಈ ಬಗ್ಗೆ ವಿಚಾರಣೆ ನಡೆಸಲು ಸಿಬಿಐ ಹಿಲೋರಿಗೆ ನೋಟೀಸ್ ಕೊಟ್ಟಿದೆ.

ಪ್ರಕರಣಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ (ಹೆಚ್ಚುವರಿ ಪೊಲೀಸ್​ ಆಯುಕ್ತ [ಆಡಳಿತ], ಬೆಂಗಳೂರು ನಗರ ಪೊಲೀಸ್​ ಕಮೀಷನರೇಟ್​) ಮತ್ತು ಅಜಯ್ ಹಿಲೋರಿ (ಕೆಎಸ್​ಆರ್​ಪಿ ಕಮಾಂಡೆಂಟ್​)  ಅವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ ಈ ಹಿಂದೆ ಅನುಮತಿ ನೀಡೀತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com