ಎಸ್‌ಪಿ ಬಾಲಸುಬ್ರಹ್ಮಣ್ಯಂ
ರಾಜ್ಯ
ಖ್ಯಾತ ಗಾಯಕ ಎಸ್‍ಪಿಬಿ ಹೆಸರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಗೀತ ಪೀಠ
ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಹೆಸರಲ್ಲಿ ಸಂಗೀತ ಪೀಠ ಸ್ಥಾಪನೆಗೆ ಮೈಸೂರು ವಿಶ್ವವಿದ್ಯಾನಿಲಯ ತೀರ್ಮಾನಿಸಿದೆ.
ಮೈಸೂರು: ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಹೆಸರಲ್ಲಿ ಸಂಗೀತ ಪೀಠ ಸ್ಥಾಪನೆಗೆ ಮೈಸೂರು ವಿಶ್ವವಿದ್ಯಾನಿಲಯ ತೀರ್ಮಾನಿಸಿದೆ.
ಸಂಗೀತ ಪೀಠ ಸ್ಥಾಪನೆಗೆ ವಿಶ್ವವಿದ್ಯಾನಿಲಯ ಸಿಂಡಿಕೇಟ್ ಅನುಮೋದನೆ ನೀಡಿದೆ..
ವಿಶ್ವವಿದ್ಯಾನಿಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಹೆಸರಿನ ಸಂಗೀತ ಪೀಠ ಪ್ರಾರಂಭವಾಗಲಿದ್ದು ಇದಕ್ಕಾಗಿ ವಾರ್ಷಿಕ ಐದು ಲಕ್ಷ ಮೀಸಲು ಇರಿಸಲಾಗುತ್ತದೆ.
ಈ ಹಣದಲ್ಲಿ ವುಶೇಷ ಉಪನ್ಯಾಸ, ಕಾರ್ಯಾಗಾರ, ಪ್ರಾತ್ಯಕ್ಷಿಕೆ. ಗ್ರಂಥ ಪ್ರಕಟಣೆ ಸೇರಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ವಿವಿ ಪ್ರಕಟಣೆ ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ