ಬೆಂಗಳೂರು: ರಾಜ್ಯದಲ್ಲಿ ಇಂದು 1,526 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,81,086ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 12 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,738 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,451 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,43,950 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 25,379 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 927 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,67,885ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ.
Advertisement
Advertisement