ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರ್ಪಡೆಗೆ ಸಚಿವ ಸಂಪುಟ ಶಿಫಾರಸ್ಸು ಸಾಧ್ಯತೆ!

ವೀರಶೈವ ಲಿಂಗಾಯ ಸಮುದಾಯಕ್ಕೆ ನಿಗಮ ಮಂಡಳಿ ರಚಿಸಿ ಆದೇಶ ಹೊರಡಿಸಿದ ಬೆನ್ನಲ್ಲೆ ಸಮುದಾಯವನ್ನು ಓಬಿಸಿಗೆ ಸೇರ್ಪಡೆಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ವೀರಶೈವ ಲಿಂಗಾಯ ಸಮುದಾಯಕ್ಕೆ ನಿಗಮ ಮಂಡಳಿ ರಚಿಸಿ ಆದೇಶ ಹೊರಡಿಸಿದ ಬೆನ್ನಲ್ಲೆ ಸಮುದಾಯವನ್ನು ಓಬಿಸಿಗೆ ಸೇರ್ಪಡೆಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. 

ಇಂದು ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಮಹತ್ವದ ಹಾಗೂ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಿದೆ ಎನ್ನಲಾಗಿದೆ. ವೀರಶೈವ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿ ಎಂದು ಪಂಚಮಸಾಲಿ ಪೀಠದ ಶ್ರೀಗಳು ಉಪವಾಸ ಸತ್ಯಾಗ್ರಹ ನಡೆಸಿದ್ದರು.

ಅಲ್ಲದೆ ವೀರಶೈವ ಲಿಂಗಾಯ ಸಮುದಾಯಕ್ಕೆ ಒಬಿಸಿ ಸೇರ್ಪಡೆ ಮಾಡುವಂತೆ ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ, ಎಂ.ಬಿ.ಪಾಟೀಲ್ ಹಾಗೂ ವೀರಶೈವ ಮಹಾಸಭಾ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಎಲ್ಲರ ಮನವಿಯನ್ನು ಪುರಸ್ಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಸೇರ್ಪಡೆಗೆ ಶಿಫಾರಸ್ಸು ಮಾಡಲಿದ್ದಾರೆ ಎನ್ನಲಾಗಿದೆ.

ಲಿಂಗಾಯತ ಪಂಚಮಸಾಲಿ ಮೀಸಲಾತಿ : ಮುಖ್ಯಮಂತ್ರಿಗಳಿಂದ ಕೂಡಲಸಂಗಮ ಪಂಚಮಸಾಲಿ ಜಗದ್ಗುರುಗಳಿಗೆ ಭರವಸೆ
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದ 2ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಹಕ್ಕೊತ್ತಾಯಕ್ಕೆ ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಗುರುವಾರ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ನಿಯೋಗಕ್ಕೆ ಸಕಾರಾತ್ಮಕ ಭರವಸೆ ನೀಡಿದರು.

ಪಂಚಮಸಾಲಿ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಜಗದ್ಗುರುಗಳವರು ಆಕ್ಟೊಬರ್ 28ರಂದು ಬೆಳಗಾವಿಯ ಸುವರ್ಣವಿಧಾನಸೌಧದ ಮುಂಭಾಗದಲ್ಲಿ ಐತಿಹಾಸಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. 

ಮುಖ್ಯಮಂತ್ರಿಗಳು ದೂರವಾಣಿ ಕರೆ ಮೂಲಕ ಉಪವಾಸ ಕೈಬಿಡುವಂತೆ ಸಂಪರ್ಕಿಸಿದಾಗ ನವಂಬರ್ 28ರ ಒಳಗಾಗಿ ಸರ್ಕಾರ ಸ್ಪಂದಿಸಬೇಕು ಎಂಬ ಕಾಲಮಿತಿಯನ್ನು ಸಿಎಂ ರವರು ಒಪ್ಪಿದ ಮೇಲೆ ಶ್ರೀಗಳು ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು. ಅದರಂತೆ ಇಂದು ಭೇಟಿ ಮಾಡಿದಾಗ ಮುಖ್ಯಮಂತ್ರಿಗಳು ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com