ಬೆಂಗಳೂರು: ನಾಪತ್ತೆಯಾಗಿದ್ದ 32 ವರ್ಷದ ಮಹಿಳೆ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ 32 ವರ್ಷದ ಮಹಿಳೆಯೊಬ್ಬರು ನಗರದ ಲಾಡ್ಜ್ ನಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಾಪತ್ತೆಯಾಗಿದ್ದ 32 ವರ್ಷದ ಮಹಿಳೆಯೊಬ್ಬರು ನಗರದ ಲಾಡ್ಜ್ ನಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

ನಗರದ ಕಲಾಸಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ಜ್ ನಲ್ಲಿ ಶವ ಪತ್ತೆಯಾಗಿದ್ದು, ಮೃತ ಮಹಿಳೆಯನ್ನು ಸಿದ್ದಾಪುರ ನಿವಾಸಿ ಕಮಲಾ(32) ಎಂದು ಗುರುತಿಸಲಾಗಿದೆ.

ನವೆಂಬರ್ 24ರಂದು ಕಮಲಾ ನಾಪತ್ತೆಯಾಗಿದ್ದು, ದಿಲೀಪ್ ಕುಮಾರ್ ಎಂಬುವವರೊಂದಿಗೆ ಲಾಡ್ಜ್ ಗೆ ತೆರಳಿದ್ದರು.
  
ದಿಲೀಪ್ ಕುಮಾರ್ ನೇ ಮಹಿಳೆಯನ್ನು ಹತ್ಯೆಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
  
ಘಟನೆಗೆ ಸಂಬಂಧಿಸಿದಂತೆ ಕಲ್ಯಾಸಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com