ಕೋವಿಡ್ ಸೋಂಕು ನಿಯಂತ್ರಣ: ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಕೋವಿಡ್-19 ನಿಯಂತ್ರಣ, ನಿಗಾವಣೆ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಹೊರಡಿಸಿದ್ದು, ಇದು ಡಿಸೆಂಬರ್ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ.
ಕೋವಿಡ್ ಸೋಂಕು ನಿಯಂತ್ರಣ: ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ
Updated on

ಬೆಂಗಳೂರು:  ಕೋವಿಡ್-19 ನಿಯಂತ್ರಣ, ನಿಗಾವಣೆ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಹೊರಡಿಸಿದ್ದು, ಇದು ಡಿಸೆಂಬರ್ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ.

ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶ ಜಾರಿ ಮಾಡಿದ್ದಾರೆ.

ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಮಾತ್ರ ವಸ್ತು ಪ್ರದರ್ಶನ ಮಳಿಗೆಗಳನ್ನು ನೀಡಬೇಕು, ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾಭವನದ ಸಾಮರ್ಥ್ಯವನ್ನು ಶೇಕಡ 50ಕ್ಕೆ ಮಾತ್ರ ನಿಯಂತ್ರಿಸಬೇಕು, ಇದೇ ಮಾನದಂಡದಡಿ ಧಾರ್ಮಿಕ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡಬಹುದು.

ಸೋಂಕು ಪಾಸಿಟಿವಿಟಿ ದರ ಶೇಕಡ 10ಕ್ಕಿಂತ ಹೆಚ್ಚಿರುವ ಪ್ರದೇಶಗಳ ಕಚೇರಿಗಳಲ್ಲಿ ಏಕಕಾಲಕ್ಕೆ ಹಾಜರಾಗುವ ಸಿಬ್ಬಂದಿಯ ಸಂಖ್ಯೆಯನ್ನು ಕಡಿತಗೊಳಿಸಲು ಅಥವಾ ಪಾಳಿಯ ಆಧಾರದಲ್ಲಿ ಕಚೇರಿ ಸಮಯವನ್ನು ನಿಗದಿಪಡಿಸಿ, ಸೋಂಕು ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು, ಶೇಕಡ 50 ಅಥವಾ ಅದಕ್ಕಿಂತ ಹೆಚ್ಚು ನೌಕರರನ್ನು ಹೊಂದಿರುವ ಸಂಸ್ಥೆ ಹಾಗೂ ಕಚೇರಿಗಳಲ್ಲಿ ಆರೋಗ್ಯ ಸೇತು ಆ್ಯಪ್ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು, ಸೋಂಕು ನಿಯಂತ್ರಣಕ್ಕಾಗಿ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಅಡಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಜಿಲ್ಲಾಡಳಿತಗಳು ದುರ್ಬಲಗೊಳಿಸುವಂತಿಲ್ಲ ಎಂದು ಹೇಳಿದೆ.

ಕೆಲಸದ ಸ್ಥಳಗಳಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚು ಒತ್ತು ನೀಡಬೇಕು, ಮನೆಯಿಂದ ಕೆಲಸ ಮಾಡುವ ಪದ್ಧತಿಗೆ ಹೆಚ್ಚಿನ ಪ್ರೋತ್ಸಾಹ, ಸೋಂಕು ಪತ್ತೆ ಪರೀಕ್ಷೆ ಜೊತೆಗೆ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು, ನಿಯಮಿತವಾಗಿ ಸೋಂಕು ನಿವಾರಣೆ ಸಿಂಪಡಿಸಿ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com