ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಚೇತರಿಕೆ: ವೈದ್ಯರು

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಸಂತೋಷ್
ಸಂತೋಷ್
Updated on

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

"ಸಂತೋಷ್ ಅವರನ್ನು ನಿನ್ನೆ ರಾತ್ರಿ 8.30ಕ್ಕೆ ಆಸ್ಪತ್ರೆಗೆ ಕರೆತರಲಾಯಿತು ಮತ್ತು ಅವರು ನಿದ್ದೆ ಮಾತ್ರೆಗಳನ್ನು ಸೇವಿಸಿದ್ದರು. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಶನಿವಾರ ಬೆಳಗ್ಗೆ ಉಪಾಹಾರ ಸೇವಿಸಿದ್ದು, ಹರ್ಷಚಿತ್ತದಿಂದಿದ್ದಾರೆ. ಇಂದು ಸಂಜೆ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗುವುದು ಮತ್ತು ಅವರ ಆರೋಗ್ಯ ಸ್ಥಿತಿಯನ್ನು ಆಧರಿಸಿ ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್ ಮಾಡಬಹುದು ಎಂದು ಎಂ.ಎಸ್.ರಾಮಯ್ಯ ಸ್ಮಾರಕ ಆಸ್ಪತ್ರೆಯ ಅಧ್ಯಕ್ಷ ನರೇಶ್ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂತೋಷ್ ಅವರು ಶುಕ್ರವಾರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಕುಟುಂಬಸ್ಥರು ಅವರನ್ನು ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ತುರ್ತುನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಎಂಎಸ್ ರಾಮಯ್ಯ ಆಸ್ಪತ್ರೆಯ ವರದಿ ಆಧರಿಸಿ ಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಈ ಮಧ್ಯೆ, ಕುಟುಂಬದಲ್ಲಿ ಅಥವಾ ಸಂಬಂಧಿಕರಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಆದರೆ ಅವರು ಕೆಲವು ದಿನಗಳಿಂದ ಒತ್ತಡದಲ್ಲಿದ್ದರು ಮತ್ತು ಶುಕ್ರವಾರ ಅವರು ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಸಂತೋಷ್ ಪತ್ನಿ ಜಾಹ್ನವಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com