ಬೆಂಗಳೂರಿನ ಯುವಕ ಮುರುಡೇಶ್ವರದಲ್ಲಿ ಸಮುದ್ರ ಪಾಲು

ಮುರುಡೇಶ್ವರದ ಸಮುದ್ರದಲ್ಲಿ ಬೆಂಗಳೂರಿನ ಯುವಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ನೀರು ಪಾಲು
ನೀರು ಪಾಲು

ಭಟ್ಕಳ: ಮುರುಡೇಶ್ವರದ ಸಮುದ್ರದಲ್ಲಿ ಬೆಂಗಳೂರಿನ ಯುವಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಇಲ್ಲಿನ‌ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುರುಡೇಶ್ವರ ಸಮುದ್ರದಲ್ಲಿ ಈಜ್ಲು ಹೋದ ಬೆಂಗಳೂರು ಮೂಲದ ಯುವಕನೊಬ್ಬ ಅಲೆಗಳ ರಭಸಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಬಾಣಸಂದ್ರ ನಿವಾಸಿ ಮಂಜುನಾಥ್ ವೆಂಕಟೇಶ್ ಮಡಿವಾಳ (20 ವರ್ಷ)  ಮೃತಪಟ್ಟವರು.

ಮೃತ ಮಂಜುನಾಥ್ ವೆಂಕಟೇಶ್ ತನ್ನ ಏಳು ಜನ ಸ್ನೇಹಿತರೊಂದಿಗೆ ಈಜುತ್ತಿರುವಾಗ ಈ ದುರ್ಘಟನೆ ನಡೆದಿದೆ. ಈಜಲು ಸಮುದ್ರಕ್ಕೆ ಇಳಿದಿದ್ದ ಏಳು ಮಂದಿ ಪೈಕಿ ಮಂಜುನಾಥ್ ಅವರನ್ನು ಹೊರತು ಪಡಿಸಿ ಉಳಿದವರು ನೀರಿನಿಂದ ಮೇಲೆ ಬಂದಿದ್ದರು. ಆದರೆ ಮಂಜುನಾಥ್ ಅಲೆಗಳ  ರಭಸಕ್ಕೆ ಸಿಲುಕಿದ್ದು, ದಡದಲ್ಲಿದ್ದ ಮೀನುಗಾರರು ಗಮನಿಸಿ ಅವರ ರಕ್ಷಣೆ ಮಾಡಿ ಸಮುದ್ರದಿಂದ ಮೇಲೆ ತಂದಿದ್ದಾರೆ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟ್ಟು ಹೊತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು.

ಮಂಜುನಾಥ್ ಬೆಂಗಳೂರಿನಲ್ಲಿ ವೈದ್ಯಕೀಯ ಸೇವೆಯಲ್ಲಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿರುವ ಅವರ ಕುಟುಂಬ ಸದಸ್ಯರಿಗೆ ಘಟನೆ ಕುರಿತಂತೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com