ಬೆಳಗಾವಿ ಸವದತ್ತಿಯಲ್ಲಿ ಭೀಕರ ಅಪಘಾತ, 7 ಕೂಲಿ ಕಾರ್ಮಿಕರು ಸಾವು

ಬೆಳಗಾವಿ: ಬೊಲೆರೋ ಹಾಗೂ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಕೂಲಿ ಕಾರ್ಮಿಕರು ಪ್ರಾಣಬಿಟ್ಟಿರುವ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಸಮೀಪ ನಡೆದಿದೆ.
ಸವದತ್ತಿ ಪಟ್ಟಣ ಹೊರವಲಯದಲ್ಲಿ ಸಂಬವಿಸಿದ ಅಪಘಾತದಲ್ಲಿ ಮೃತರಾದವರೆಲ್ಲರೂ ರಾಮದುರ್ಗ ತಾಲೂಕಿನ ಚಿಂಚನೂರು ಗ್ರಾಮಕ್ಕೆ ಸೇರಿದವರಾಗಿದ್ದು ಕೆಲಸ ಮುಗಿಸಿ ತೆರಳುತ್ತಿದ್ದರೆಂದು ಹೇಳಲಾಗಿದೆ.
ಮೊರಬ್ನಿಂದ ಸವದತ್ತಿ ಮಾರ್ಗದಿಂದ ರಾಮದುರ್ಗಕ್ಕೆ ತೆರಳುವಾಗ ಸವದತ್ತಿಯಲ್ಲಿ ಧಾರವಾಡದ ಕಡೆ ಹೊರಟಿದ್ದ ಬೊಲೆರೋಗೆ ಟಾಟಾ ಏಸ್ ಢಿಕ್ಕಿಯಾಗಿದೆ.
ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನೊಬ್ಬ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾನೆ. ಇದಲ್ಲದೆ ಘಟನೆಯಲ್ಲಿ ಹತ್ತಕ್ಕೂ ಹೆಚ್ಚಿನ ಜನರಿಗೆ ಗಾಯಗಳಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಅಮರನಾಥ ರೆಡ್ಡಿ, ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


