ಡ್ರಗ್ಸ್ ಪ್ರಕರಣ: ತಡರಾತ್ರಿಯಲ್ಲಿ ಐದು ಪಬ್ ಗಳ ಮೇಲೆ ಸಿಸಿಬಿ ದಾಳಿ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ವಿಚಾರಣೆ ಪ್ರಗತಿಯಲ್ಲಿರುವಂತೆಯೇ ಇತ್ತ ಸಿಸಿಬಿ ಅಧಿಕಾರಿಗಳು ನಿನ್ನೆ ತಡರಾತ್ರಿ ನಗರದ ಪ್ರತಿಷ್ಠಿತ ಪಬ್ ಗಳ ಮೇಲೆ ದಾಳಿ ಮಾಡಿದ್ದಾರೆ.
ಸಿಸಿಬಿ ಕಚೇರಿ
ಸಿಸಿಬಿ ಕಚೇರಿ
Updated on

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ವಿಚಾರಣೆ ಪ್ರಗತಿಯಲ್ಲಿರುವಂತೆಯೇ ಇತ್ತ ಸಿಸಿಬಿ ಅಧಿಕಾರಿಗಳು ನಿನ್ನೆ ತಡರಾತ್ರಿ ನಗರದ ಪ್ರತಿಷ್ಠಿತ ಪಬ್ ಗಳ ಮೇಲೆ ದಾಳಿ ಮಾಡಿದ್ದಾರೆ.

ಕಳೆದ ರಾತ್ರಿ ನಗರದ ಪ್ರತಿಷ್ಠಿತ ಬಾರ್ ಹಾಗೂ ಪಬ್​​​ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ನಿನ್ನೆ ತಡರಾತ್ರಿ, ಕ್ಲೌಡ್ ನೈನ್, ಸ್ಕೈ ಬಾರ್, ಸ್ಟರ್ಲಿಂಗ್ ಮ್ಯಾಕ್ ಹೋಟೆಲ್, ಯುಬಿ ಸಿಟಿ ಸೇರಿದಂತೆ ಐದು ಕಡೆ ದಾಳಿ ನಡೆಸಲಾಗಿದೆ. ಕಡಿಮೆ ಬೆಲೆಯ ಆಫರ್  ನೀಡಿ ಗ್ರಾಹಕರನ್ನು ಸೆಳೆಯುತ್ತಿರುವ ಶಂಕೆ ಮೇರೆಗೆ, ಮತ್ತು ಅಕ್ರಮ ಚಟುವಟಿಕೆಗಳು ನಡೆಯುತ್ತಿರಬಹುದು ಎಂಬ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದರು.

ಈ ಕುರಿತಂತೆ ಅಧಿಕಾರಿಗಳು ಮೊದಲೇ ಕಾರ್ಯಾಚರಣೆ ರೂಪಿಸಿ ಕೋರ್ಟ್​​ನಿಂದ ಸರ್ಚ್ ವಾರೆಂಟ್ ಪಡೆದು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com