ಸಚಿವ ಸಿ.ಟಿ.ರವಿ ರಾಜೀನಾಮೆ

ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಚಿವ ಸಿಟಿ ರವಿ (ಸಂಗ್ರಹ ಚಿತ್ರ)
ಸಚಿವ ಸಿಟಿ ರವಿ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಸಿಎಂ ಯಡಿಯೂರಪ್ಪ ಅವರಿಗೆ ಶನಿವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಆದರೆ ಗಾಂಧಿ ಜಯಂತಿಯಂದು ಸಿಎಂ ಯಡಿಯೂರಪ್ಪ ಸಿಗದ ಕಾರಣ ನಿನ್ನೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿ.ಟಿ ರವಿ ರಾಜೀನಾಮೆ ಸ್ವೀಕಾರ ಬಗ್ಗೆ ಸೋಮವಾರವೇ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.

ಇನ್ನು ನಾಳೆ ಅಂದರೆ ಸೋಮವಾರ ದೆಹಲಿಗೆ ಪ್ರಯಾಣ ಬೆಳಸಲಿರುವ ರವಿ ಅವರು, ಅಲ್ಲಿ ರಾಜೀನಾಮೆ ಬಗ್ಗೆ ಹಿರಿಯ ನಾಯಕ ಜೆಪಿ ನಡ್ಡಾಗೆ ಮಾಹಿತಿ ನೀಡಲಿದ್ದಾರೆ. ಅಕ್ಟೋಬರ್ 5, 6ರಂದು ದೆಹಲಿಯಲ್ಲಿ ಪಕ್ಷದ ಸಂಘಟನಾ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. 

ಬಿಜೆಪಿಯಲ್ಲಿ ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮವಿದೆದ್ದು, ಹೀಗಾಗಿ ಪಕ್ಷದ ಹುದ್ದೆ ನೀಡಿದರೆ ಸಚಿವ ಸ್ಥಾನದಲ್ಲಿ ಮುಂದುವರಿಯುವಂತಿಲ್ಲ. ಈ ಕಾರಣಕ್ಕೆ ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com