ಡಿ.ಕೆ. ಶಿವಕುಮಾರ್ ನಿವಾಸ ಮೇಲೆ ಸಿಬಿಐ ದಾಳಿ ಮೋದಿ ಸರ್ಕಾರದ ರಾಜಕೀಯ ದುಷ್ಟತನದ ಪರಮಾವಧಿ: ಸಿದ್ದರಾಮಯ್ಯ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಡುತ್ತಿರುವ ಕುತಂತ್ರ ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಡುತ್ತಿರುವ ಕುತಂತ್ರ ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದು ನರೇಂದ್ರ ಮೋದಿ ಸರ್ಕಾರ ನಡೆಸಿರುವ ರಾಜಕೀಯ ದುಷ್ಟತನದ ಪರಮಾವಧಿಯಾಗಿದ್ದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ದಿವಾಳಿತನವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪ ಚುನಾವಣೆಯ ಸಂದರ್ಭದಲ್ಲಿ ಸಿಬಿಐ ದಾಳಿ ಮಾಡಿಸಿರುವುದು ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಈ ಹೊತ್ತಿನಲ್ಲಿ ನಮ್ಮ ಸ್ಥೈರ್ಯವನ್ನು ಕುಗ್ಗಿಸಲು, ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com