ಶಿರಾ ಉಪ ಚುನಾವಣೆ: ಕಾಂಗ್ರೆಸ್ ಸೇರಿದ ಕಲ್ಕೆರೆ ರವಿ, ಜೆಡಿಎಸ್​ಗೆ ಮರ್ಮಾಘಾತ!

ಶಿರಾ ಉಪಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಜೆಡಿಎಸ್​ಗೆ ಭಾರಿ ಹಿನ್ನಡೆಯುಂಟಾಗಿದ್ದು, ಜೆಡಿಎಸ್ ಪಕ್ಷದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಾವರೆಕೆರೆ ಜಿಲ್ಲಾ ಪಂಚಾಯತ್‌ನ ಜೆಡಿಎಸ್ ಸದಸ್ಯೆ ಲತಾ ಅವರ ಪತಿ ಕಲ್ಕೆರೆ ರವಿ (ರವಿ ಕುಮಾರ್) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಸೇರಿದ ಕಲ್ಕೆರೆ ರವಿ
ಕಾಂಗ್ರೆಸ್ ಸೇರಿದ ಕಲ್ಕೆರೆ ರವಿ

ತುಮಕೂರು: ಶಿರಾ ಉಪಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಜೆಡಿಎಸ್​ಗೆ ಭಾರಿ ಹಿನ್ನಡೆಯುಂಟಾಗಿದ್ದು, ಜೆಡಿಎಸ್ ಪಕ್ಷದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಾವರೆಕೆರೆ ಜಿಲ್ಲಾ ಪಂಚಾಯತ್‌ನ ಜೆಡಿಎಸ್ ಸದಸ್ಯೆ ಲತಾ ಅವರ ಪತಿ ಕಲ್ಕೆರೆ ರವಿ (ರವಿ ಕುಮಾರ್) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕಲ್ಕೆರೆ ರವಿಕುಮಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವುದು ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಅನೇಕ ವರ್ಷಗಳಿಂದ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಕಲ್ಕೆರೆ  ರವಿಕುಮಾರ್ ದಿಢೀರನೆ ಕಾಂಗ್ರೆಸ್ ಪಕ್ಷಕ್ಕೆ ಹಾರಿದ್ದಾರೆ. ರವಿಕುಮಾರ್ ಪತ್ನಿ ಲತಾ ಅವರು ತಾವರೆಕೆರೆ ಜಿಲ್ಲಾ ಪಂಚಾಯತ್‌ನ ಜೆಡಿಎಸ್ ಸದಸ್ಯೆ ಆಗಿದ್ದಾರೆ. ಅಲ್ಲದೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆಯಾಗಿ ಕೂಡ ಅಧಿಕಾರ ನಡೆಸುತ್ತಿದ್ದಾರೆ.

ಇತ್ತೀಚೆಗೆ ಶಿರಾ ಪಟ್ಟಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿಯೂ ಕೂಡ ಭಾಗವಹಿಸಿದ್ದ ಕಲ್ಕೆರೆ ರವಿಕುಮಾರ್, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಸಂಪೂರ್ಣ ಬೆಂಬಲ ನೀಡಿ ಕೆಲಸ ಮಾಡುತ್ತೇನೆ ಎಂದು ವೇದಿಕೆಯಲ್ಲಿ ಘೋಷಿಸಿದ್ದರು. ಅಲ್ಲದೆ ತಾವು ಕೂಡ ಟಿಕೆಟ್ ಆಕಾಂಕ್ಷಿ ಎಂಬುದಾಗಿ  ಜೆಡಿಎಸ್ ಮುಖಂಡರ ಗಮನಕ್ಕೆ ತಂದಿದ್ದರು. ಆದರೆ, ಇದ್ದಕ್ಕಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್ ಪಕ್ಷ ಸೇರಿರುವುದು ಕ್ಷೇತ್ರದಲ್ಲಿ ಜೆಡಿಎಸ್​​ಗೆ ಸಾಕಷ್ಟು ಹಿನ್ನೆಡೆ ಅನುಭವಿಸುವಂತಾಗಿದೆ.

ಜೆಡಿಎಸ್ ನಿಂದ ಬಿಜೆಪಿಗೆ ಹಾರಿದ ಜಿಲ್ಲಾ ಪಂಚಾಯತ್ ಸದಸ್ಯೆ ಪತಿ
ರವಿಕುಮಾರ್ ಮಾತ್ರವಲ್ಲದೆ ಕಾಡುಗೊಲ್ಲ ಸಮುದಾಯಕ್ಕೆ ಸೇರಿದ ಜಿಲ್ಲಾ ಪಂಚಾಯತ್ ಸದಸ್ಯೆ ಗಿರಿಜಾ ಅವರ ಪತಿ ಕೂಡ ಬಿಜೆಪಿಗೆ ಹಾರಿದ್ದಾರೆ. ಇದು ಜೆಡಿಎಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಜೆಡಿಎಸ್ ನಲ್ಲಿ ಬಂಡಾಯದ ಅಲೆ ಸೃಷ್ಟಿ ಶಿರಾ ಉಪಚುನಾವಣೆ
ಶಿರಾ ಉಪಚುನಾವಣೆ ಟಿಕೆಟ್ ವಿಚಾರ ಸುದ್ದಿಗೆ ಗ್ರಾಸವಾಗುತ್ತಲೇ ಜೆಡಿಎಸ್ ನಲ್ಲಿ ಬಂಡಾಯದ ಅಲೆ ಸೃಷ್ಟಿಯಾಗಿದೆ ಎನ್ನಲಾಗಿದೆ. ಜೆಡಿಎಸ್ ಮುಖಂಡರು ಬೇರೆ ಪಕ್ಷಗಳತ್ತ ಮುಖ ಮಾಡುತ್ತಿದ್ದಾರೆ.‌ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕೆಲ ಪ್ರಭಾವಿ ಮುಖಂಡರು ಕಾಂಗ್ರೆಸ್ ಪಕ್ಷದತ್ತ ವಲಸೆ ಹೋಗುತ್ತಿರುವುದು  ಜೆಡಿಎಸ್ ಪಕ್ಷದ ಮುಖಂಡರಲ್ಲಿ ತಳಮಳ ಸೃಷ್ಟಿಸಿದೆ. ದಿವಂಗತ ಸತ್ಯನಾರಾಯಣ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲು ಈಗಾಗಲೇ ಜೆಡಿಎಸ್ ಮುಖಂಡರು ಸಿದ್ಧತೆ ನಡೆಸಿದ್ದಾರೆ. ಹಾಗಾಗಿ, ಜೆಡಿಎಸ್ ಮುಖಂಡರು ಬೇರೆ ಪಕ್ಷಗಳತ್ತ ಮುಖ ಮಾಡುತ್ತಿರುವುದಕ್ಕೆ ಕಾರಣ ಎನ್ನಲಾಗ್ತಿದೆ. ಹೀಗೆ ಜೆಡಿಎಸ್  ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕೆಲ ಪ್ರಭಾವಿ ಮುಖಂಡರು ಕಾಂಗ್ರೆಸ್ ಪಕ್ಷದತ್ತ ವಲಸೆ ಹೋಗುತ್ತಿರುವುದು ಜೆಡಿಎಸ್ ಪಕ್ಷದ ಮುಖಂಡರಲ್ಲಿ ತಳಮಳ ಸೃಷ್ಟಿಸಿದೆ. ಸತ್ಯನಾರಾಯಣ ಅವರ ಕುಟುಂಬದವರು ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದರೆ ಹೊರಗಡೆಯಿಂದ ಅಭ್ಯರ್ಥಿ ಕರೆತಂದು ಕಣಕ್ಕಿಳಿಸುವ  ಲೆಕ್ಕಾಚಾರ ಜೆಡಿಎಸ್ ಪಕ್ಷದಲ್ಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com