ರಾಜ್ಯ

ರಾಜ್ಯದಲ್ಲಿ ಒಂದೇ ದಿನ ಲಕ್ಷ ಕೋವಿಡ್‌ ಪರೀಕ್ಷೆ, ಶೀಘ್ರವೇ 1.5 ಲಕ್ಷಕ್ಕೆ ಏರಿಕೆ ಗುರಿ: ಸಚಿವ ಸುಧಾಕರ್‌

ಮಂಗಳವಾರ ಒಂದೇ ದಿನ ಒಂದು ಲಕ್ಷ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ‌ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ ಲಕ್ಷ ಕೋವಿಡ್‌ ಪರೀಕ್ಷೆ, ಶೀಘ್ರವೇ 1.5 ಲಕ್ಷಕ್ಕೆ ಏರಿಕೆ ಗುರಿ: ಸಚಿವ ಸುಧಾಕರ್‌
ಕೆ ಸುಧಾಕರ್
Published On :

ಬೆಂಗಳೂರು: ಮಂಗಳವಾರ ಒಂದೇ ದಿನ ಒಂದು ಲಕ್ಷ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ‌ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಚಿವರು, ಮಂಗಳವಾರ ಒಂದೇ ದಿನ 1,04, 348 ಕೋವಿಡ್‌ ಟೆಸ್ಟ್‌ ನಡೆಸುವ ಮೂಲಕ ಈ ಹಿಂದೆ ಹೇಳಿದಂತೆ ನಿಗದಿತ ಗುರಿ ತಲುಪಿದ್ದೇವೆ ಎಂದಿದ್ದಾರೆ.

ರಾಜ್ಯಾದ್ಯಂತ ಇರುವ 146 ಲ್ಯಾಬ್‌ಗಳ ಮೂಲಕ 55,690 ಆರ್‌ಟಿಪಿಸಿಆರ್ ಹಾಗೂ 48,658 ರಾಪಿಟ್ ಆಂಟಿನೆಜ್ ಟೆಸ್ಟ್‌ ನಡೆಸಲಾಗಿದೆ. ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.