ವಿಧಾನ ಪರಿಷತ್ತಿನ ಶಿಕ್ಷಕರು, ಪದವೀಧರರ 4 ಕ್ಷೇತ್ರಗಳ ಚುನಾವಣೆ: 52 ಅಭ್ಯರ್ಥಿಗಳಿಂದ 96 ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಪರಿಷತ್‌ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗ ಳಿಗೆ ಅ.೨೮ ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು,೫೭ ಅಭ್ಯ ರ್ಥಿಗಳು ೯೬ ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರಾಜ್ಯ ವಿಧಾನಪರಿಷತ್‌ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗ ಳಿಗೆ ಅ.೨೮ ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, 57 ಅಭ್ಯ ರ್ಥಿಗಳು 96 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ,ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷ ಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. 

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪುಟ್ಟಣ್ಣ, ಜೆಡಿಎಸ್ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರವೀಣ್ ಕುಮಾರ್ ಸೇರಿದಂತೆ 12 ಅಭ್ಯ ರ್ಥಿಗಳು 19 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚಿದಾನಂದ, ಜೆಡಿಎಸ್ ಅಭ್ಯರ್ಥಿಯಾಗಿ ಚೌಡರೆಡ್ಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಮೇಶ್ ಬಾಬು, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಡಿ.ಟಿ. ಶ್ರೀನಿವಾಸ ಸೇರಿದಂತೆ 18 ಅಭ್ಯರ್ಥಿಗಳು 29 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com