ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸಾರ್ವಕಾಲಿಕ ದಾಖಲೆ!

ಬೆಂಗಳೂರು: ರಾಜ್ಯದಲ್ಲಿ ಬುಧವಾ ದಾಖಲೆಯ 10,947 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ ಇಷ್ಟೊಂದು ಪ್ರಕರಣ ದಾಖಲಾಗಿರುವುದು ಇದೇ ಮೊದಲಾಗಿದೆ.
ಒಂದೇ ದಿನ 10,947 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,16,153ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ 113 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 9,574ಕ್ಕೆ ಏರಿದೆ.
ಅಕ್ಟೋಬರ್ 1 ರಂದು 96,588 ಮಂದಿಗೆ ಕೊರೋನಾ ಪರೀಕ್ಷೆ ನಡೆದಿರುವುದು ಈ ವರೆಗಿನ ದಾಖಲೆಯಾಗಿತ್ತು. ಒಟ್ಟು 55.24 ಲಕ್ಷ ಪರೀಕ್ಷೆಗಳು ಈ ವರೆಗೆ ನಡೆದಿದೆ. ಈ ವರೆಗೆ 6.68 ಲಕ್ಷ ಮಂದಿಗೆ ಕೊರೋನಾ ಸೋಂಗು ತಗುಲಿದೆ.
ಕೋವಿಡ್ ವಾರ್ ರೂಂ ಉಸ್ತುವಾರಿ ಮುನೀಶ್ ಮೌದ್ಗಿಲ್ ಅವರು ಮಾತನಾಡಿ, ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ, ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ದೈನಂದಿನ ಆರ್'ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗಿದೆ. ಹೀಗಾಗಿಯೇ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿನೆ. ಮುಂಬೈ ಮತ್ತು ಚೆನ್ನೈನಲ್ಲಿ ಪ್ರತಿದಿನ ಸುಮಾರು 13,000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಬೆಂಗಳೂರು ಅದೇ ಸಂಖ್ಯೆಯ ಪರೀಕ್ಷೆಗಳನ್ನು ಮಾಡಿದರೆ, ನಮ್ಮ ದೈನಂದಿನ ಪ್ರಕರಣಗಳು 1,500 ಕ್ಕಿಂತ ಕಡಿಮೆಯಿರುತ್ತವೆ. ಆದರೆ ಕಡಿಮೆ ಪ್ರಕರಣಗಳಿವೆ ಎಂದು ಹೇಳಿಕೊಳ್ಳಲು ಪರೀಕ್ಷೆ ಕಡಿಮೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


