ಮುಖ್ಯಮಂತ್ರಿಗಳನ್ನು ಭೇಟಿಯಾಗಬೇಕೆ? ಕೊರೋನಾ ಟೆಸ್ಟ್ ಕಡ್ಡಾಯ!

ಸಿಎಂ ಯಡಿಯೂರಪ್ಪ ಸೇರಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕೃಷ್ಣಾಗೆ ಬರುವ ಸಾರ್ವಜನಿಕರು, ಅಧಿಕಾರಿಗಳಿಗೆ ಕೊರೋನಾ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಯಡಿಯೂರಪ್ಪ
ಯಡಿಯೂರಪ್ಪ
Updated on

ಬೆಂಗಳೂರು: ಸಿಎಂ ಯಡಿಯೂರಪ್ಪ ಸೇರಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕೃಷ್ಣಾಗೆ ಬರುವ ಸಾರ್ವಜನಿಕರು, ಅಧಿಕಾರಿಗಳಿಗೆ ಕೊರೋನಾ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ. 

ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕಚೇರಿ ಬಳಿ ಬರುವ ಪ್ರತೀಯೊಬ್ಬರಿಗೂ ಇದೀಗ ಕೊರೋನಾ ಪರಿಕ್ಷೆಯನ್ನು ಕಡ್ಡಾಯವಾಗಿ ಮಾಡಲಾಗುತ್ತಿದ್ದು, ವೈದ್ಯಕೀಯ ವರದಿಯಲ್ಲಿ ಸೋಂಕು ಇಲ್ಲ ಎಂದು ದೃಢಪಟ್ಟರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. 

ಇತ್ತೀಚೆಗಷ್ಟೇ ಪರೀಕ್ಷೆ ಮಾಡಿಸಿಕೊಂಡು ವರದಿ ನೆಗೆಟಿವ್ ಇದ್ದರೆ ಅಂತಹವರಿಗೆ ಮತ್ತೆ ಪರೀಕ್ಷೆ ಮಾಡಲಾಗುತ್ತಿಲ್ಲ. ಆದರೆ, ವರದಿಯನ್ನು ಕಡ್ಡಾಯವಾಗಿ ಸಾರ್ವಜನಿಕರ ಬಳಿ ಇಟ್ಟುಕೊಂಡಿರಬೇಕಾಗುತ್ತದೆ. ವರದಿ ಹಿಡಿದು ಬಾರದ ಜನರಿಗೆ ಕೃಷ್ಣಾದಲ್ಲಿಯೇ ಆ್ಯಂಟಿಜನ್ ಪರೀಕ್ಷೆ ನಡೆಸಿ 15 ನಿಮಿಷಗಲ್ಲಿ ವೈದ್ಯಕೀಯ ವರದಿಯನ್ನು ನೀಡಲಾಗುತ್ತಿದೆ. 

ಮೂಗು ಮತ್ತು ಗಂಟಲಿನಿಂದ ಸ್ಯಾಂಪಲ್ಸ್ ಸಂಗ್ರಹಿಸಿದ ಬಳಿಕ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಬಳಿಕ 15 ನಿಮಿಷಗಳಲ್ಲಿ ವರದಿ ನೀಡಿ ವರದಿಯಲ್ಲಿಯಲ್ಲಿ ನೆಗೆಟಿವ್ ಇದ್ದರೆ ಮಾತ್ರ ಮುಖ್ಯಮಂತ್ರಿಗಳ ಕಚೇರಿಗೆ ತೆರಳಲು ಅನುಮತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಚೇರಿಗೆ ಭೇಟಿ ನೀಡಿ ಬಂದ ವ್ಯಕ್ತಿಯೊಬ್ಬರು ಹೇಳಿದ್ದಾರೆ. 

ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತರ್ ಅವರು ಮಾತನಾಡಿ, ಸಿಎಂ ಕಚೇರಿಗೆ ಬರುವ ಪ್ರತೀಯೊಬ್ಬರಿಗೂ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ. ವರದಿ ನೆಗೆಟಿವ್ ಇದ್ದರೆ ಮಾತ್ರ ಕಚೇರಿಯೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುತ್ತದೆ. ಪ್ರತೀಯೊಬ್ಬರನ್ನು ಸುರಕ್ಷಿತದಿಂದ ಇರುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. 

ಈ ಕ್ರಮವನ್ನು ಮೊದಲೇ ಕೈಗೊಳ್ಳಬೇಕಿತ್ತು: ಬಿಎಸ್'ವೈ ಆಪ್ತರು
ಆರೋಗ್ಯ ಇಲಾಖೆ ಈ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳ ಸಲಹೆಗಾರರು, ಆಪ್ತರು ಹಾಗೂ ಇತರೆ ಅಧಿಕಾರಿಗಳು ಈ ಮೊದಲೇ ಇಲಾಖೆ ಈ ಕ್ರಮಗಳನ್ನು ಕೈಗೊಂಡಿದ್ದರೆ, ಉತ್ತಮವಾಗಿರುತ್ತಿತ್ತು ಎಂದು ಹೇಳಿದ್ದಾರೆ. 

ಆರೋಗ್ಯ ಇಲಾಖೆಯ ಈ ಕ್ರಮ ಸ್ವಾಗತಾರ್ಹ. ಆದರೆ, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿ, ಗೃಹ ಕಚೇರಿ ಕೃಷ್ಣಾಗೆ ಪ್ರತೀನಿತ್ಯ 200-300 ಜನರು ಆಗಮಿಸುತ್ತಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾಗಿರುವ ಕಾವೇರಿಗೆ 100 ಜನರಾದರೂ ಬರುತ್ತಿರುತ್ತಾರೆಂದು ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com