ರಾಜ್ಯದಲ್ಲಿ ಕೊರೋನಾ ಅಬ್ಬರ: 9 ದಿನದಲ್ಲಿ 78 ಸಾವಿರ ಮಂದಿಗೆ ಸೋಂಕು
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಅಬ್ಬರ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕೇವಲ 9 ದಿನಗಳಲ್ಲಿ ಬರೋಬ್ಬರಿ 78 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಅಬ್ಬರ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕೇವಲ 9 ದಿನಗಳಲ್ಲಿ ಬರೋಬ್ಬರಿ 78 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಸತತ ಮೂರನೇ ದಿನವಾದ ಶುಕ್ರವಾರ ಕೂಡ 10 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ 10,913 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದಿನನಿತ್ಯದ ಸೋಂಕಿತರ ಸಂಖ್ಯೆ ಪುನಃ 11 ಸಾವಿರ ಅಂಚಿಗೆ ಬಂದು ನಿಂತಿದೆ.
ನಿನ್ನೆ ಒಂದೇ ದಿನ 9,091 ಮಂದಿ ಸೋಂಕಿನಿಂದ ಗುಣಮುಖರಾಗುವುದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 1,18,851ಕ್ಕೆ ತಲುಪಿದೆ.
24 ಗಂಟೆಗಳಲ್ಲಿ ಮಹಾಮಾರಿ ವೈರಸ್ 114 ಮಂದಿಯನ್ನು ಬಲಿಪಡೆದುಕೊಂಡಿದ್ದು, ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 9789ಕ್ಕೆ ಏರಿಕೆಯಾಗಿದೆ.
ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುನೀಶ್ ಮೌದ್ಗಿಲ್ ಅವರು, ಜನರು ಪರೀಕ್ಷೆಗೊಳಪಡಲು ತಡ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.
ಜನರು ಮೊದಲೇ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಸೋಂಕಿತರನ್ನು ಶೀಘ್ರಗತಿಯಲ್ಲಿ ಗುರ್ತಿಸಿ, ವೈದ್ಯಕೀಯ ಚಿಕಿತ್ಸೆ ನೀಡುವ ಕೆಲಸ ಮಾಡಬಹುದು. ರಾಜ್ಯದಲ್ಲಿ ಸಂಭವಿಸುತ್ತಿರುವ ಬಹುತೇಕ ಸಾವು ತಡವಾಗಿ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವುದರಿಂದಲೇ ಸಂಭವಿಸುತ್ತಿದೆ. ಜನರು ಶೀಘ್ರಗತಿಯಲ್ಲಿ ಪರೀಕ್ಷೆಗೊಳಗಾಗಿ ಸೋಂಕಿತರನ್ನು ಶೀಘ್ರಗತಿಯಲ್ಲಿ ಗುರ್ತಿಸಿದ್ದೇ ಆದರೆ, ಸಾಕಷ್ಟು ಪ್ರಕರಣಗಳನ್ನು ಸುಲಭವಾಗಿ ನಿಭಾಯಿಸಬಹುದಾಗಿದೆ. ಸೋಂಕಿತರನ್ನು ಪತ್ತೆ ಮಾಡುವುದು, ಚಿಕಿತ್ಸೆ ವಿಳಂಬವಾಗುವುದು ಅತ್ಯಂತ ಅಪಾಯಕಾರಿಯಾಗಿದೆ. ನಾಗರೀಕರ ಅಸಹಕಾರ ಹೆಚ್ಚಿನ ಪ್ರಾಣಹಾನಿಯನ್ನುಂಟು ಮಾಡುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


