ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಮಂದಿಗೆ ಅವಕಾಶ!

ನಾಡಹಬ್ಬ ದಸರಾ ಆಚರಣೆಯ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಹಾಗೂ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕೋವಿಡ್-19 ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿತು.
ದಸರಾ ಜಂಬೂ ಸವಾರಿಗೆ ಸಿದ್ಧತೆ ನಡೆಸುತ್ತಿರುವ ಸಿಬ್ಬಂದಿಗಳು
ದಸರಾ ಜಂಬೂ ಸವಾರಿಗೆ ಸಿದ್ಧತೆ ನಡೆಸುತ್ತಿರುವ ಸಿಬ್ಬಂದಿಗಳು
Updated on: 

ಮೈಸೂರು: ನಾಡಹಬ್ಬ ದಸರಾ ಆಚರಣೆಯ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಹಾಗೂ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕೋವಿಡ್-19 ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿತು.

ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾ ಆಚರಣೆಯ ಪೂರ್ವಭಾವಿ ಸಿದ್ಧತಾ ಕಾರ್ಯಗಳನ್ನು ಕುರಿತಂತೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದ ಅಧಿಕಾರಿಗಳು, ಚಾಮುಂಡಿಬೆಟ್ಟ ಹಾಗೂ ಅಂಬಾವಿಲಾಸ ಅರಮನೆಯ ಆವರಣವನ್ನು ವೀಕ್ಷಿಸಿದರು.

ಈ ವೇಳೆ ಕೋವಿಡ್-19 ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ.ಸುದರ್ಶನ್ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ದಸರಾ ಕಾರ್ಯಕ್ರಮಗಳನ್ನು ಹೇಗೆ ನಡೆಸಬೇಕು ಹಾಗೂ ಸೋಂಕು ಹರಡದಂತೆ ಯಾವ ಬಗೆಯ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಈಗಾಗಲೇ ಸ್ಥಳ ಪರಿಶೀಲಿಸಲಾಗಿದೆ ಎಂದರು.

ಈ ಸಂಬಂಧ ಕೋವಿಡ್-19 ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್ ನೇತೃತ್ವದ ತಂಡವು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. 

ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಮಂದಿಗೆ ಅವಕಾಶ, ಅರಮನೆಯ ಸಾಂಸ್ಕೃತಿಕ ಕಾರ್ಯಕ್ರಮಗಳಇಗೆ 50 ಮಂದಿಗೆ ಅವಕಾಶ ಅರಮನೆ ಮುಂದೆ 2 ಗಂಟೆ ಮಾತ್ರ ಕಾರ್ಯಕ್ರಮ ನಡೆಸಬೇಕು. ಹಾಗೆಯೇ ದೀಪಾಲಂಕಾರ ನಿತ್ಯ 2 ಗಂಟೆ ಮಾತ್ರ ಇರಬೇಕು. ಅ.14 ನಂತರ ಟೆಸ್ಟ್ ಕಡ್ಡಾಯ. ಅಂತರ ರಾಜ್ಯ ಹಾಗೂ ವಿದೇಶಿ ಕಲಾವಿದರಿಗೆ ಈ ಬಾರಿ ದಸರಾದಲ್ಲಿ ಭಾಗಿಯಾಗಲು ಅವಕಾಶ ಇಲ್ಲ. ಮೈಸೂರು ಸೇರಿದಂತೆ ಇತರೆ ಜಿಲ್ಲೆ ಕಲಾವಿದರಿಗೆ ಮಾತ್ರ ಅವಕಾಶ. ಮಾಸ್ಕ್ ಕಡ್ಡಾಯ. 6 ಅಡಿ ಸಾಮಾಜಿಕ ಅಂತರ ಕಡ್ಡಾಯ ಪಾಲನೆಯಾಗಬೇಕೆಂದು ಸಮಿತಿಯು ವರದಿ ಸಲ್ಲಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com