ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತಕೃಷ್ಣ ನಿಧನ
ಮಂಗಳೂರು ಮೂಲದ ಕರ್ಣಾಟಕ ಬ್ಯಾಂಕ್ನ ಮಾಜಿ ಅಧ್ಯಕ್ಷ ಮತ್ತು ಸಿಇಒ ಅನಂತಕೃಷ್ಣ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಾವಧಿಯ ಅನಾರೋಗ್ಯದ ನಂತರ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಂಗಳೂರು: ಮಂಗಳೂರು ಮೂಲದ ಕರ್ಣಾಟಕ ಬ್ಯಾಂಕ್ನ ಮಾಜಿ ಅಧ್ಯಕ್ಷ ಮತ್ತು ಸಿಇಒ ಅನಂತಕೃಷ್ಣ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಾವಧಿಯ ಅನಾರೋಗ್ಯದ ನಂತರ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಅವರುಗೆ 74 ವರ್ಷ ವಯಸ್ಸಾಗಿತ್ತು.ಮೃತರಿಗೆ ಪತ್ನಿ ಮತ್ತು ಮಗ ಇದ್ದಾರೆ.
ಬಂಟ್ವಾಳದವರಾದ ಅನಂತಕೃಷ್ಣ 1971 ರಲ್ಲಿ ಕರ್ಣಾಟಕ ಬ್ಯಾಂಕ್ಗೆ ಅಧಿಕಾರಿಯಾಗಿ ಸೇರಿದರು. ಅವರು ಕಾರ್ಯಾಚರಣೆ ಮತ್ತು ನಿರ್ವಹಣಾ ಮಟ್ಟದಲ್ಲಿ ವಿಭಿನ್ನ ಸಾಮರ್ಥ್ಯದ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ 2000 ನೇ ಇಸವಿಯಲ್ಲಿ ಅಧ್ಯಕ್ಷ ಮತ್ತು ಸಿಇಒ ಆಗಿ ನೇಮಕಗೊಂಡರು.
ಅನಂತಕೃಷ್ಣ ಅವರು 2009 ರವರೆಗೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.ಬಳಿಕ ಅವರು ಬ್ಯಾಂಕಿನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮುಂದುವರಿದು 2016 ರಲ್ಲಿ ನಿವೃತ್ತರಾದರು.
ಕರ್ಣಾಟಕ ಬ್ಯಾಂಕ್ ಅವರ ನಾಯಕತ್ವದಲ್ಲಿ ತ್ವರಿತ ಪ್ರಗತಿ ಕಂಡಿದ್ದು ಉತ್ತಮ ಬೆಳವಣಿಗೆಗೆ ಸಾಕ್ಷಿಯಾಗಿತ್ತು, ಅಲ್ಲದೆ ಕರ್ನಾಟಕದ ಹೊರಗೂ ಸಹ ತನ್ನ ಶಾಖೆಯನ್ನು ತೆರೆದಿತ್ತು.
ಅನಂತಕೃಷ್ಣ ಅವರು ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ನ ಗೌರವ ಕಾರ್ಯದರ್ಶಿಯಾಗಿ ಮತ್ತು ಮಂಗಳೂರಿನ ಬ್ಯಾಂಕರ್ಸ್ ಕ್ಲಬ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


