

ಉಡುಪಿ: ಉಡುಪಿಯ ಬಿಜೆಪಿ ಶಾಸಕ ರಘುಪತಿ ಭಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.
ಶಾಸಕ ಭಟ್ ಸಧ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
"ಆತ್ಮಿಯರೇ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆ ವಹಿಸಿ. ಧನ್ಯವಾದಗಳು." ಶಾಸಕರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.