ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಾಜ್ಯದಲ್ಲಿ 5612.50 ಕಿ.ಮೀ. ರಸ್ತೆ ನಿರ್ಮಾಣ: ಕೆ.ಎಸ್. ಈಶ್ವರಪ್ಪ

ಕೇಂದ್ರ ಸರ್ಕಾರವು ಮುಖ್ಯ ರಸ್ತೆ ಹಾಗೂ ಪ್ರಮುಖ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣಕ್ಕಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5612.50 ಕಿ.ಮೀ ಹಂಚಿಕೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಕೇಂದ್ರ ಸರ್ಕಾರವು ಮುಖ್ಯ ರಸ್ತೆ ಹಾಗೂ ಪ್ರಮುಖ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣಕ್ಕಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5612.50 ಕಿ.ಮೀ ಹಂಚಿಕೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ಕೇಂದ್ರ ಸರ್ಕಾರದ ಪಾಲು ಶೇ.60 ಮತ್ತು ರಾಜ್ಯ ಸರ್ಕಾರದ ಪಾಲು ಶೇ.40 ರಷ್ಟಿರುತ್ತದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ  445 ರಸ್ತೆ ಕಾಮಗಾರಿಗಳು ಹಾಗೂ 26 ಉದ್ದದ ಸೇತುವೆಗಳನ್ನೊಳಗೊಂಡಂತೆ 3226.21 ಕಿ.ಮೀ ಗಳ ಉದ್ದದ ಗ್ರಾಮೀಣ ರಸ್ತೆಗಳನ್ನು 2729.66 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಬ್ಯಾಚ್-1 ರಡಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಮೂರನೇ ಹಂತದಲ್ಲಿ ಎಲ್ಲಾ ರಸ್ತೆ ಮತ್ತು ಸೇತುವೆ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ವಿವಿಧ ಹಂತದ ಪ್ರಗತಿಯಲ್ಲಿರುತ್ತವೆ.ಉಳಿಕೆ 2410.93 ಕಿ.ಮೀ ಉದ್ದದ ರಸ್ತೆ ಕಾಮಗಾರಿಗಳ ಪ್ರಸ್ತಾವನೆ ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆಯಲ್ಲಿದ್ದೇವೆ ಎಂದರು.

ಕೇಂದ್ರ ಸರ್ಕಾರದ ಸ್ವಾಮಿತ್ವ ಯೋಜನೆಯು ಸರ್ವೆ ಆಫ್ ಇಂಡಿಯಾ, ರಾಜ್ಯದ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com