ಬೆಂಗಳೂರು ವಿಶ್ವವಿದ್ಯಾಲಯ: ಮುಂದೂಡಲ್ಪಟ್ಟಿದ್ದ ಬಿ.ಕಾಂ ಪರೀಕ್ಷೆ ಅ.17ಕ್ಕೆ ನಿಗದಿ

ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯನ್ನು ಅ.17ಕ್ಕೆ ನಿಗದಿ ಮಾಡಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯನ್ನು ಅ.17ಕ್ಕೆ ನಿಗದಿ ಮಾಡಲಾಗಿದೆ. 

ಬಿ.ಕಾಂ 6ನೇ ಸೆಮಿಸ್ಟರ್'ನ ಪ್ರಿನ್ಸಿಪಲ್ಸ್ ಆ್ಯಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್ ವಿಷಯದ ಪರೀಕ್ಷೆಯನ್ನು ಅ.17ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೂ ನಡೆಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಅಂತಿಮ ಪರೀಕ್ಷೆ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ವಿದ್ಯಾರ್ಥಿಗಳು ಬಂದಿದ್ದರು. ಪರೀಕ್ಷೆ ಬಳಿಕ ಊರುಗಳಿಗೆ ಹೊರಡಲು ಸಿದ್ಧರಾಗಿದ್ದರು. ಪರೀಕ್ಷೆ ಬರೆಯುವ ಸಲುವಾಗಿ ಕೊಠಡಿಯೊಳಗೆ ವಿದ್ಯಾರ್ಥಿಗಳು ಕುಳಿತುಕೊಂಡಿದ್ದರು. ಈ ವೇಳೆ ಪರೀಕ್ಷೆ ಇಲ್ಲ ಹೊರಡುವಂತೆ ತಿಳಿಸಿದಾಗ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದರು. ಇದಾದ ಕೆಲ ನಿಮಿಷಗಳ ನಂತರ ಪ್ರಶ್ನೆಪತ್ರಿಕೆ ಸೋರಿಕೆಯಾದ ವಿಚಾರ ವಿದ್ಯಾರ್ಥಿಗಳಿಗೆ ತಿಳಿದಿತ್ತು ಎಂದು ಉಪನ್ಯಾಸಕರೊಬ್ಬರು ಹೇಳಿದ್ದಾರೆ. 

ಪರೀಕ್ಷೆಯನ್ನು ರದ್ದು ಮಾಡಿದ ಹಿನ್ನೆಲೆಯಲ್ಲಿ ರಿಜಿಸ್ಟ್ರಾರ್ ವಿರುದ್ಧ ಈ ವೇಳೆ ಕೆಲ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. 

ಪರೀಕ್ಷೆಯನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆಘಾತಕ್ಕೊಳಗಾಗಿದ್ದರು. ಬಳಿಕ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸುವುದು ಸಾಕಷ್ಟು ಕಷ್ಟಕರವಾಗಿತ್ತು. ನಮ್ಮಲ್ಲಿರುವ ವಿದ್ಯಾರ್ಥಿಗಳಲ್ಲಿ ಶೇ.20 ವಿದ್ಯಾರ್ಥಿಗಳು ಹೊರಗಿನಿಂದ ಬಂದಿರುವವರಾಗಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಂದೂಡಿರುವುದು ಸಂಕಷ್ಟವನ್ನು ತಂದೊಡ್ಡುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com