ಕೃಷ್ಣ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕ ರಾಜ್ಯದ ಪಾಲಿನಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ: ಕೇಂದ್ರ ಸ್ಪಷ್ಟನೆ

ಕೃಷ್ಣ ಜಲ ವಿವಾದ ನ್ಯಾಯಮಂಡಳಿ (ಕೆಡಬ್ಲ್ಯುಡಿಟಿ) ರಚನೆಗೆ ತೆಲಂಗಾಣ ರಾಜ್ಯ ಆಗ್ರಹಿಸುತ್ತಿದ್ದರೂ, ನದಿ ನೀರು ಹಂಚಿಕೆ ಸಂಬಂಧ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಕೃಷ್ಣ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕ ರಾಜ್ಯದ ಪಾಲಿನಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೃಷ್ಣ ಜಲ ವಿವಾದ ನ್ಯಾಯಮಂಡಳಿ (ಕೆಡಬ್ಲ್ಯುಡಿಟಿ) ರಚನೆಗೆ ತೆಲಂಗಾಣ ರಾಜ್ಯ ಆಗ್ರಹಿಸುತ್ತಿದ್ದರೂ, ನದಿ ನೀರು ಹಂಚಿಕೆ ಸಂಬಂಧ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಕೃಷ್ಣ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕ ರಾಜ್ಯದ ಪಾಲಿನಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಹೇಳಿದೆ. 

ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು, ಕೃಷ್ಣ ನದಿ ನೀರಿನ ಪಾಲನ್ನು ಕರ್ನಾಟಕ ರಾಜ್ಯಕ್ಕೆ ಹಂಚಿಕೆ ಮಾಡುವ ಕುರಿತು ಈಗಾಗಲೇ ಅಂತಿಮ ಆದೇಶವನ್ನು ನೀಡಲಾಗಿದೆ.  ಇದೀಗ ಆಂಧ್ರಪ್ರದೇಶ ಮತ್ತು ತೆಲಂಗಾಣದ ನಡುವೆ ಕೃಷ್ಣ ನದಿ ನೀರನ್ನು ಹಂಚಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಯವರು, ಕೇಂದ್ರ ಜಲಶಕ್ತಿ ಸಚಿವರು ಅವರೊಂದಿಗೆ ಕೃಷ್ಣಾ ನದಿಯ ನೀರು ಹಂಚಿಕೆ ಕುರಿತು ಮಾತನಾಡಿದ್ದು ನದಿ ನೀರಿನ ಹಂಚಿಕೆ ಅಂತಿಮವಾಗಿದೆ. ಈಸಂಬಂಧ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಹೊಸದಾಗಿ ಸಮಾಲೋಚನೆ ನಡೆಸಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com