ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ 243 ಕ್ಕೆ ಹೆಚ್ಚಳ: ಪುನರ್ ವಿಂಗಡನೆಗೆ ಆರು ತಿಂಗಳ ಗಡುವು

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪ್ರಸ್ತುತ ಇದ್ದ 198 ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಸರ್ಕಾರ ಹೆಚ್ಚಿಸಿದೆ. 
ಬಿಬಿಎಂಪಿ ಕಚೇರಿ
ಬಿಬಿಎಂಪಿ ಕಚೇರಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪ್ರಸ್ತುತ ಇದ್ದ 198 ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಸರಕಾರ ಹೆಚ್ಚಿಸಿದೆ. 

ರಾಜ್ಯಪಾಲರ ಆದೇಶನುಸಾರ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬುಧವಾರ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಮಹಾನಗರ ಪಾಲಿಕೆ ಅಧಿನಿಯಮ - 1976ರ (1977ರ ಕರ್ನಾಟಕ ಅಧಿನಿಯಮ) ಅಡಿ ಆದೇಶ ಹೊರಡಿಸಲಾಗಿದ್ದು ನಗರಾಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹಿದಾಯತುಲ್ಲಾ ಸರ್ಕಾರದ ನೋಟಿಫಿಕೇಷನ್ ಗೆ ಅಂಕಿತ ಹಾಕಿದ್ದಾರೆ.

ಇನ್ನು, ವಾರ್ಡ್‌ಗಳ ಪುನರ್‌ವಿಂಗಡಣೆಗಾಗಿ ನಾಲ್ವರು ಅಧಿಕಾರಿಗಳನ್ನು ಒಳಗೊಂಡ ವಾರ್ಡ್‌ ಪುನರ್‌ ವಿಂಗಡಣಾ ಸಮಿತಿ ರಚಿಸಿ ಸರಕಾರ ಆದೇಶ ಹೊರಡಿಸಿದ್ದು, ಶೀಘ್ರದಲ್ಲಿಯೇ ವಾರ್ಡ್‌ಗಳ ಪುನರ್‌ವಿಂಗಡಣೆಯಾಗಿ ಚುನಾವಣೆ ನಡೆಯುವುದು ಖಚಿತವಾಗಿದೆ.

ಸಮಿತಿಯ ಅಧ್ಯಕ್ಷತೆಯನ್ನು ಬಿಬಿಎಂಪಿ ಆಯಕ್ತರು ವಹಿಸಿಕೊಂಡಿದ್ದರೆ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಬಿಬಿಎಂಪಿಯ ವಿಶೇಷ (ಕಂದಾಯ ಆಯುಕ್ತರು) ಸಮಿತಿಯಲ್ಲಿ ಇದ್ದಾರೆ. ಈ ಸಮಿತಿಗೆ 6 ತಿಂಗಳ ಕಾಲಮಿತಿಯನ್ನು ಸರಕಾರ ನಿಗದಿಪಡಿಸಿದ್ದು, ಅಷ್ಟರೊಳಗೆ ವಾರ್ಡ್‌ಗನ್ನು ಪುನರ್‌ವಿಂಗಡಣೆ ಮಾಡುವಂತೆ ಸರ್ಕಾರ ಸೂಚಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com