ಪ್ರಪಂಚವು ಕೊರೋನಾ ಮುಕ್ತವಾಗಲಿ, ಬೇಗ ಲಸಿಕೆ ಸಿಗಲಿ: ದಸರಾಗೆ ಚಾಲನೆ ನೀಡಿದ ಡಾ. ಮಂಜುನಾಥ್ ಆಶಯ

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಡಾ. ಸಿ.ಎನ್. ಮಂಜುನಾಥ್
ಡಾ. ಸಿ.ಎನ್. ಮಂಜುನಾಥ್
Updated on: 

ಮೈಸೂರು; ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಮಾತನಾಡಿ, ಪ್ರಪಂಚ ಕೊರೋನಾ ಸಂಕಷ್ಟಗಳಿಂದ ಮುಕ್ತವಾಗಲಿ, ಬೇಗ ಕೊರೋನಾಕ್ಕೆ ಲಸಿಕೆ ಸಿಗಲಿ ಹಾಗೂ ರಾಜ್ಯವು ಈ ಜಲಸಂಕಷ್ಟದಿಂದ ಮುಕ್ತವಾಗಲಿ ಎಂದು ಚಾಮುಂಡೇಶ್ವರಿ ತಾಯಿಯಲ್ಲಿ ಕೇಳೊಕೊಂಡಿದ್ದೇನೆ. ವೈಯುಕ್ತಿಕವಾಗಿ ಹಾಗೂ ಕುಟುಂಬಕ್ಕೋಸ್ಕರ ಏನನ್ನೂ ಕೇಳಿಕೊಂಡಿಲ್ಲ. ಇದು ತಮ್ಮ ಪತ್ನಿ ಹಾಗೂ ಮಕ್ಕಳ ಉದ್ದೇಶವೂ ಆಗಿದೆ ಎಂದು ತಿಳಿಸಿದರು.

ದಸರಾ ಮಹೋತ್ಸವದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಉದ್ಘಾಟನೆ ಮಾಡಲು ವೈದ್ಯರಿಗೆ ಅವಕಾಶ ಮಾಡಿಕೊಟ್ಟ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಈ ದಸರಾ ಮಹೋತ್ಸವವು ನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ ಹಾಗೂ ದೇಶೀಯತೆಯನ್ನು ಸಾರುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com