ಶಾಸಕ ರಾಮದಾಸ್
ರಾಜ್ಯ
ಉಸಿರಾಟದ ತೊಂದರೆ, ಶಾಸಕ ರಾಮದಾಸ್ ದಿಢೀರ್ ಆಸ್ಪತ್ರೆಗೆ ದಾಖಲು
ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ದಿಢೀರ್ ಆಸ್ಪತ್ರೆಗೆ ಸೇರಿಸಲಾಗಿದೆ.
ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ದಿಢೀರ್ ಆಸ್ಪತ್ರೆಗೆ ಸೇರಿಸಲಾಗಿದೆ.
ಇಂದು ಬೆಳಿಗ್ಗೆ ಅವರಿಗೆ ಏಕಾಏಕಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದು , ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ವೈದ್ಯರು ಮುಂದಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ರಾಮದಾಸ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದಲೂ ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದರು. ಇದೀಗ ದಿಢೀರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಇನ್ನೂ ಬರಬೇಕಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಕಳೆದ ಫೆಬ್ರುವರಿಯಲ್ಲಿ ಲಘು ಹೃದಯಾಘಾತವಾಗಿ ನಂತರ ಸ್ಟಂಟ್ ಅಳವಡಿಸಲಾಗಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ