ಬೆಂಗಳೂರು: ರೈಲ್ವೆ ಆಸ್ಪತ್ರೆಯಲ್ಲಿ ಕೋವಿಡ್ ಸೌಲಭ್ಯ ಹೆಚ್ಚಳ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಹಿಂದೆ ಇರುವ ರೈಲ್ವೆ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಎರಡು ಆಮ್ಲಜನಕ ಸಂಗ್ರಹ ಟ್ಯಾಂಕ್ ಗಳ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಹಿಂದೆ ಇರುವ ರೈಲ್ವೆ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಎರಡು ಆಮ್ಲಜನಕ ಸಂಗ್ರಹ ಟ್ಯಾಂಕ್ ಗಳ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ.

ಸುಮಾರು 5 ಸಾವಿರ ಸಿಬ್ಬಂದಿಯನ್ನು ಪರೀಕ್ಷಿಸಲಾಗಿದ್ದು, 1 ಸಾವಿರ ಮಂದಿಗೆ ಪಾಸಿಟಿವ್ ವರದಿಯಾಗಿದೆ.ಈ ಪೈಕಿ 210 ಸಕ್ರಿಯ ಪ್ರಕರಣಗಳಾಗಿದ್ದು, 85 ಮಂದಿ ರೈಲ್ವೆ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಹೋಮ್ ಐಸೋಲೇಷನ್ ನಲ್ಲಿ ಇರುವುದಾಗಿ
ಬೆಂಗಳೂರು ವಿಭಾಗೀಯ ರೈಲ್ವೆ ಮ್ಯಾನೇಜರ್ ಅಶೋಕ್ ಕುಮಾರ್ ವರ್ಮಾ ತಿಳಿಸಿದ್ದಾರೆ.

ಈವರೆಗೂ ಕೋವಿಡ್-ನಿಂದಾಗಿ ಬೆಂಗಳೂರು ರೈಲ್ವೆ ವಿಭಾಗದಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಕೆಆರ್ ಪುಂರ ಲೊಕೊ ಶೆಡ್ ನಲ್ಲಿ ಪರೀಕ್ಷೆ ನಡೆಸಿದ ನಂತರ 32 ಸಿಬ್ಬಂದಿಗೆ ಪಾಸಿಟಿವ್ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ರೈಲ್ವೆ ಆಸ್ಪತ್ರೆ ಕೋವಿಡ್ ಕೇರ್ ಆರೈಕೆ ಕೇಂದ್ರದಲ್ಲಿ ಪ್ರಸ್ತುತ 40 ವಾರ್ಡ್ ಹಾಸಿಗೆಗಳು, 14 ಐಸಿಯು ಹಾಸಿಗೆಗಳು , ಅಂಬ್ಯುಲೆನ್ಸ್ ಸೇವೆ, ರೆಡಿಯಾಲಾಜಿ, ಮತ್ತು ಪ್ರಯೋಗಾಲಯ ಸೇವೆಗಳು ಲಭ್ಯವಿದೆ. 

ಪ್ರಸ್ತುತ ಅಲ್ಲಿನ ರೋಗಿಗಳಿಗೆ ಅಮ್ಲಜನಕ ಸಿಲಿಂಡರ್ ಗಳನ್ನು ಬಳಸಲಾಗುತ್ತಿದ್ದು, ಒಂದು ತಿಂಗಳೊಳಗೆ ಆಮ್ಲಜನಕ ಸಂಗ್ರಹ ಘಟಕವನ್ನು ಸ್ಥಾಪಿಸಲಾಗುವುದು, ಎಲ್ಲಾ ಐಸಿಯೂ ಬೆಡ್ ಗಳಲ್ಲಿಯೂ ರೋಗಿಗಳಿರುವುದಾಗಿ ಅವರು ತಿಳಿಸಿದ್ದಾರೆ.

ಅಕ್ಟೋಬರ್ 11 ರ ಹೊತ್ತಿಗೆ  ಹುಬ್ಬಳ್ಳಿ, ಮೈಸೂರು ಮತ್ತು ಬೆಂಗಳೂರು ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ಸಿಬ್ಬಂದಿ ಮತ್ತು ಅವರ ಕುಟುಂಬಗಳ 95 ಸಾವುಗಳನ್ನು ನೈರುತ್ಯ ರೈಲ್ವೆ ವರದಿ ಮಾಡಿದೆ, ಆದರೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,302 ಆಗಿದ್ದು, ಅದರಲ್ಲಿ 265 ಇನ್ನೂ ಸಕ್ರಿಯವಾಗಿವೆ ಎಂದು ರೈಲ್ವೆ ವಲಯ ಭಾನುವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com