ಮಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಅನಾಹುತ, ಎರಡು ಅಂಗಡಿಗಳು ಭಸ್ಮ

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ವಿಟ್ಲ ಪೇಟೆಯಲ್ಲಿ ನಡೆದಿದೆ.
ಬೆಂಕಿ ಅವಘಡದ ದೃಶ್ಯ
ಬೆಂಕಿ ಅವಘಡದ ದೃಶ್ಯ
Updated on

ಮಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ವಿಟ್ಲ ಪೇಟೆಯಲ್ಲಿ ನಡೆದಿದೆ.

ವಿಟ್ಲದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ ಸಮೀಪದ ಕೆಜಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡವಾಗಿದ್ದು ಎಂಪಿ ಹಾರ್ಡ್ ವೇರ್ ಹಾಗೂ ಪೇಂಟ್ ಮತ್ತೊಂದು ಬೇಕರಿ ಸುಟ್ಟು ಕರಕಲಾಗಿದೆ.

ಮೊದಲು ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರದಲ್ಲಿ ಪಕ್ಕದಲ್ಲಿನ ಬೇಕರಿಗೆ ವ್ಯಾಪಿಸಿದೆ. 

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com