ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊರೋನಾ ಎಫೆಕ್ಟ್: 1 ರಿಂದ 12ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ಕಡಿತ

ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್‌ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.

ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್‌ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.

ರಾಜ್ಯ ಸರ್ಕಾರ ಸಹ ಕೇಂದ್ರ ಸರ್ಕಾರದಂತೆ 1 ರಿಂದ 12 ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ವಸ್ತುವನ್ನು ಕಡಿತ ಮಾಡಿದೆ. ಅದರಂತೆ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ಶೇ. 30 ರಷ್ಟು ಪಠ್ಯ ಕಡಿತ ಮಾಡಿದೆ. 

ಕರ್ನಾಟಕ ಸಂಗೀತ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಯಾವುದೇ ವಿದ್ಯಾರ್ಥಿ ದಾಖಲಾಗದಿರುವ ಹಿನ್ನೆಲೆಯಲ್ಲಿ ಅದನ್ನು ಈ ಪ್ರಕ್ರಿಯೆಯಿಂದ ಈ ವಿಷಯವನ್ನು ಕೈಬಿಡಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com