ಕರ್ನಾಟಕ ಭೂ ಸುಧಾರಣೆಗಳ ವಿಧೇಯಕಕ್ಕೆ ಹೊಸದಾಗಿ ಸುಗ್ರೀವಾಜ್ಞೆ ತರಲು ಸಂಪುಟ ಸಭೆ ನಿರ್ಧಾರ

ಕರ್ನಾಟಕ ಭೂ ಸುಧಾರಣೆಗಳ ಎರಡನೇ ತಿದ್ದುಪಡಿ ವಿಧೇಯಕಕ್ಕೆ ಮತ್ತೆ ಹೊಸದಾಗಿ ಸುಗ್ರೀವಾಜ್ಞೆ ಜಾರಿಗೆ ತರಲು ನಿನ್ನೆ ನಡೆದ ಸಂಪುಟ ಸಚಿವ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕ ಭೂ ಸುಧಾರಣೆಗಳ ಎರಡನೇ ತಿದ್ದುಪಡಿ ವಿಧೇಯಕಕ್ಕೆ ಮತ್ತೆ ಹೊಸದಾಗಿ ಸುಗ್ರೀವಾಜ್ಞೆ ಜಾರಿಗೆ ತರಲು ನಿನ್ನೆ ನಡೆದ ಸಂಪುಟ ಸಚಿವ ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಐಎಂಎ, ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ಗಳು ಠೇವಣಿದಾರರಿಗೆ ಸೇರಿದ ಸಾವಿರಾರು ಕೋಟಿ ರೂಪಾಯಿ ವಂಚಿಸಿರುವ ಬೆನ್ನಲ್ಲೇ ಕಠಿಣ ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ. 

ಈ ಉದ್ದೇಶಕ್ಕಾಗಿ ‘ಕರ್ನಾಟಕ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ನಿಯಮ–2020’ರ ಹೆಸರಿನಲ್ಲಿ ಕಾಯ್ದೆ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. 2019ರಲ್ಲಿ ಕೇಂದ್ರ ಸರ್ಕಾರ ಈ ಸಂಬಂಧ ಕಾಯ್ದೆಯೊಂದನ್ನು ಜಾರಿ ಮಾಡಿದ್ದು, ಅದನ್ನು ಆಧಾರವಾಗಿಟ್ಟುಕೊಂಡು ರಾಜ್ಯದಲ್ಲಿ ನಿಯಮಗಳ ಚೌಕಟ್ಟು ರೂಪಿಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಒಪ್ಪಿಗೆ ಪಡೆದು ಕಾಯ್ದೆ ಜಾರಿಗೊಳಿಸಲು ಸಂಪುಟ ಸಭೆ ನಿರ್ಧರಿಸಿದೆ.

ಬೆಂಗಳೂರಿನ ಮೊದಲ ಪವರ್ ಜೆನರೇಷನ್ ಪ್ರಾಜೆಕ್ಟ್ ಗೆ ಸಂಪುಟದಲ್ಲಿ ಅನುಮೋದನೆ ನೀಡಲಾಯಿತು. ಫ್ರೆಂಚ್ ಜೆನರೇಷನ್ ಕಂಪನಿಗೆ ಅನುಮತಿ ನೀಡಲಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಸಮೀಪದ ಚಿಕ್ಕನಾಗಮಂಗಲ ಬಳಿ ಘಟಕ ಸ್ಥಾಪಿಸಲಾಗುವುದು. ಪವರ್ ಜನರೇಟ್ ಮಾಡಲು ಕಂಪನಿ ಪ್ರತಿದಿನ ಸುಮಾರು 500 ಟನ್ ಘನ ತ್ಯಾಜ್ಯ ಬಳಸಿಕೊಳ್ಳುವುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com