ಯಡಿಯೂರಪ್ಪ
ಯಡಿಯೂರಪ್ಪ

ಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಚಿದಾನಂದ ಪರ ಇಂದು ಯಡಿಯೂರಪ್ಪ ಪ್ರಚಾರ

ಚುನಾವಣಾ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪ್ರಚಾರದ ಭರಾಟೆ ಹೆಚ್ಚಾಗಿದ್ದು, ಇಂದು ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ ಗೌಡ ಅವರ ಪರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರ ನಡೆಸಲಿದ್ದಾರೆ. 

ದಾವಣಗೆರೆ: ಚುನಾವಣಾ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪ್ರಚಾರದ ಭರಾಟೆ ಹೆಚ್ಚಾಗಿದ್ದು, ಇಂದು ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ ಗೌಡ ಅವರ ಪರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರ ನಡೆಸಲಿದ್ದಾರೆ. 

ಮುಖ್ಯಮಂತ್ರಿಗಳು ಪ್ರಚಾರದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಾಗವಾಡಿಯವರು, ಪ್ರಚಾರದ ವೇಳೆ ಶಿಕ್ಷಕರು, ಕೊರೋನಾ ವಾರಿಯರ್ಸ್ ಮತ್ತು ಪದವೀಧರರನ್ನು ಸಬಲೀಕರಣಗೊಳಿಸುವ ಸರ್ಕಾರದ ಕ್ರಮಗಳ ಕುರಿತು ಯಡಿಯೂರಪ್ಪ ಅವರು ಮಾತನಾಡಲಿದ್ದಾರೆಂದು ಹೇಳಿದ್ದಾರೆ. 

ಚುನಾವಣೆಯಲ್ಲಿ ಬಿಜೆಪಿ ಬಂಡಾಯ ನಾಯಕರಾದ ಡಿಟಿ ಶ್ರೀನಿವಾಸ್ ಮತ್ತು ಡಾ.ಹಾಳನೂರು ಎಸ್ ಲೇಪಾಕ್ಷಿಯವರು ಸ್ಪರ್ಧಿಸುತ್ತಿದ್ದು. ಈ ಬೆಳವಣಿಗೆ ಬಿಜೆಪಿ ಅಭ್ಯರ್ಥಿಯ ಮೇಲೆ ಯಾವುದೇ ರೀತಿಯ ಪರಿಣಾ ಬೀರುವುದಿಲ್ಲ. ನಮ್ಮ ಅಭ್ಯರ್ಥಿ ಗರಿಷ್ಟ ಮತಗಳೊಂದಿಗೆ ಗೆಲುವು ಸಾಧಿಸಲಿದ್ದಾರೆಂದು ತಿಳಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com