ಡಾ. ಸುಧಾಮೂರ್ತಿ ಬಗ್ಗೆ ಅವಹೇಳನ: ನಿರ್ದೇಶಕ ಅಮರ್ ವಿರುದ್ಧ ದೂರು

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರನ್ನು ಅವಹೇಳನ ಮಾಡಿದ ಆರೋಪದಡಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುಧಾ ಮೂರ್ತಿ
ಸುಧಾ ಮೂರ್ತಿ
Updated on: 

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರನ್ನು ಅವಹೇಳನ ಮಾಡಿದ ಆರೋಪದಡಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್‌ ಸೀರೀಸ್‌ನಲ್ಲಿ ಸುಧಾಮೂರ್ತಿ ಅವರಿಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ರಾಜಾಧ್ಯಕ್ಷ ಜಯರಾಜ್ ನಾಯ್ಡು(43) ದೂರು ದಾಖಲಿಸಿದ್ದಾರೆ.

ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್ ಸೀರೀಸ್ ನಿರ್ದೇಶಕ ಅಮರ್ ಹಾಗೂ ಸೀರೀಸ್​ನ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವೆಬ್ ಸೀರೀಸ್​ನಲ್ಲಿ ಬರುವ ಸನ್ನಿವೇಶದಲ್ಲಿ ಸುಧಾಮೂರ್ತಿ ಅಮ್ಮನವರ ಹೆಸರಬದಲಿಸಿ, ಏಕವಚನದಲ್ಲಿ ಅವಳು, ಇವಳು ಅಂದಿದ್ದಲ್ಲದೇ, ಗಂಡನ ದುಡ್ಡಲ್ಲಿ ಶೋಕಿ ಮಾಡುವವಳು ಎಂದು ಅವಹೇಳನಕಾರಿ ಪದ ಬಳಕೆ ಮಾಡಲಾಗಿದೆ ಎಂದು ಎಫ್ ಐ ಆರ್ ನಲ್ಲಿ ಜಯರಾಜ್ ನಾಯ್ಡು ಉಲ್ಲೇಖಿಸಿದ್ದಾರೆ.

ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com