

ಮಂಗಳೂರು: ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿನಾಮ ನವದಂಪತಿಗಳು ಸಾವನ್ನಪ್ಪಿದ್ದಾರೆ.
ಮೃತರನ್ನು ಬಜಾಲ್ ನಿವಾಸಿ ರಯಾನ್ ಫರ್ನಾಂಡಿಸ್ ಮತ್ತು ಪ್ರಿಯಾ ಫರ್ನಾಂಡಿಸ್ ಎಂದು ಗುರುತಿಸಲಾಗಿದೆ.
ಉಳ್ಳಾಲ ಬಂಗೇರಲೇನ್ ನಲ್ಲಿ ಬಾಡಿಗೆ ಮನೆಯಲ್ಲಿದ್ದ ಇವರು ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದರು.
ದಂಪತಿಗಳಿದ್ದ ಬೈಕ್ ಉಳ್ಳಾಲ ಕಡೆಗೆ ತಿರುಗುವ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿದ್ದ ಪರಿಣಾಮ ಪ್ರಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ರಯಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮರಣ ಹೊಂದಿದ್ದಾರೆ.
ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Advertisement