ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಲ್ಲಿ 17 ಬಾಲ ಕಾರ್ಮಿಕರ ರಕ್ಷಣೆ

ಮಲ್ಪೆ ಬಂದರಿನಲ್ಲಿ ಮೀನು ಹಿಡಿಯುವ ಕೆಲಸದಲ್ಲಿ ನಿರತರಾಗಿದ್ದ 17 ಬಾಲ ಕಾರ್ಮಿಕರನ್ನು ಗುರುವಾರ ರಕ್ಷಣೆ ಮಾಡಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಹಿಡಿಯುವ ಕೆಲಸದಲ್ಲಿ ನಿರತರಾಗಿದ್ದ 17 ಬಾಲ ಕಾರ್ಮಿಕರನ್ನು ಗುರುವಾರ ರಕ್ಷಣೆ ಮಾಡಲಾಗಿದೆ. 

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ ಮತ್ತು ಪೊಲೀಸ್, ಮಕ್ಕಳ ಸಹಾಯವಾಣಿ ಮತ್ತು ನಾಗರಿಕ ಸೇವಾ ಟ್ರಸ್ಟ್‌ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಕ್ಕಳನ್ನು ರಕ್ಷಣೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ರಕ್ಷಣೆಗೊಳಗಾಗಿರುವ ಬಾಲಕಾರ್ಮಿಕರೆಲ್ಲರೂ ಕೊಪ್ಪಳ, ಬಳ್ಳಾರಿ ಮೂಲದವರೆಂದು ಹೇಳಲಾಗುತ್ತಿದೆ. ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ. 

ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರು ಕೂಡ ರಕ್ಷಣೆಗೆ ಸಹಕಾರ ನೀಡಿದ್ದಾರೆ. ಸದ್ಯ ಮಕ್ಕಳ ಕಲ್ಯಾಣ ಸಮಿತಿ ಮುಂದೆ 17 ಬಾಲ ಕಾರ್ಮಿಕರನ್ನು ಹಾಜರುಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com